ಬ್ಯಾಂಕ್ ಪರೀಕ್ಷೆ : ಆನ್‍ಲೈನ್ ತರಬೇತಿ

ದಾವಣಗೆರೆ, ಏ.27- ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಮುಂದಿನ ದಿನಗಳಲ್ಲಿ ಅಧಿಕಾರಿಗಳು ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿವಿ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 50 ದಿನಗಳ ತರಬೇತಿಯನ್ನು ಆನ್‍ಲೈನ್‍ನಲ್ಲಿ ನೀಡಲು ನಿರ್ಧರಿಸಲಾಗಿದೆ. 

ಆಸಕ್ತರು ಇದೇ ದಿನಾಂಕ 30 ರ ಬೆಳಗ್ಗೆ 10 ರಿಂದ ಸಂಜೆ 4 ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು 0821-2515944 ಕ್ಕೆ ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಡಾ. ಎ. ಖಾದರ್‍ಪಾಷ ತಿಳಿಸಿದ್ದಾರೆ. 

error: Content is protected !!