ದಾವಣಗೆರೆ, ಜು.19 – ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ ಹಾಗೂ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಬ್ಯಾಂಕ್ ಮ್ಯಾನೇಜರ್ ಸಹಿ ಪಡೆದು, ತಮ್ಮ ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 27 ಇವರಿಗೆ ಇದೇ ದಿನಾಂಕ 25 ರೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ನಿಗದಿತ ನಮೂನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಪಡೆಯಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-234849 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.