ಮಲೇಬೆನ್ನೂರು, ಏ.27- ಪಟ್ಟಣದಲ್ಲಿ ಕೊರೊನಾ ಹರಡದಂತೆ ಪುರಸಭೆಯಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪುರಸಭೆ ಅಧ್ಯಕ್ಷೆ ಶ್ರೀಮತಿ ಪಾನಿಪೂರಿ ರಂಗನಾಥ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಚರ್ಚಿಸಲು ಶೀಘ್ರವೇ ಪುರಸಭೆಯಲ್ಲಿ ಸದಸ್ಯರ ಹಾಗೂ ಅಧಿಕಾರಿಗಳ ತುರ್ತುಸಭೆ ಕರೆಯಲಾಗುವುದು. ಎಲ್ಲಾ 23 ವಾರ್ಡ್ಗಳಲ್ಲಿ ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಲು ವೈದ್ಯಾಧಿಕಾರಿಗಳ ಜೊತೆ ಚರ್ಚಿಸುತ್ತೇವೆ ಎಂದರು.