ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದ ದಿ|| ನೆಸ್ವಿ ಸಣ್ಣಗಿರಿಯಪ್ಪ ಅವರ ಪುತ್ರರೂ ಮತ್ತು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರೂ ಆದ ಶ್ರೀ ಎನ್.ಬಿ. ರಾಮಪ್ಪ ಅವರು ದಿನಾಂಕ 03.03.2021ರ ಬುಧವಾರ ಮಧ್ಯಾಹ್ನ 1.30 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 70 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 04.03.2021ರ ಗುರುವಾರ ಮಧ್ಯಾಹ್ನ 12 ಗಂಟೆಗೆ ರಾಜನಹಳ್ಳಿ ಗ್ರಾಮದ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024