ದಾವಣಗೆರೆ, ಮಾ.4- ರಾಜ್ಯ ಸರ್ಕಾರಿ ನೌಕರರ 18 ತಿಂಗಳ ತುಟ್ಟಿಭತ್ಯೆ ರದ್ದು ಹಾಗೂ ಖಾಲಿ ಹುದ್ದೆ ಭರ್ತಿ ಮಾಡದಿರುವುದನ್ನು ಖಂಡಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾ ಘಟಕ ನೇತೃತ್ವದಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ನಟರಾಜ್, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಜಿಲ್ಲಾ ಖಜಾಂಚಿ ಗೋವಿಂದರಾಜು, ತಾಲ್ಲೂಕು ಅಧ್ಯಕ್ಷ ರೇವಣ ಸಿದ್ದಪ್ಪ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರಂಗೇಶ್, ಪದಾಧಿಕಾರಿಗಳಾದ ಬಸವರಾಜ್, ಅಷ್ಫಕ್ ಖಾನ್, ಹರೀಶ್, ಹನುಮಂತಪ್ಪ, ದೇವರಾಜು, ವೀರಯ್ಯ, ಉಮೇಶ್, ರೇವಣಸಿದ್ದಪ್ಪ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳು ಭಾಗವಹಿಸಿದ್ದರು.