ಕೊಂಡಜ್ಜಿ ಪರೀಕ್ಷಾ ಕೊಠಡಿಗೆ ಜಿಲ್ಲಾಧಿಕಾರಿ ಭೇಟಿ

ಹರಿಹರ, ಜು.22- ಕೊಂಡಜ್ಜಿ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೊಠಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ತಹಶೀಲ್ದಾರ್‌ ಕೆ.ಬಿ. ರಾಮಚಂದ್ರಪ್ಪ, ಬಿಇಓ ಸಿದ್ದಪ್ಪ ಸೇರಿದಂತೆ, ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ಮಾತಗಳನ್ನಾಡುವುದರ ಜೊತೆಗೆ ನೀವು ಇಂದು ಏಕಾಗ್ರತೆಯಿಂದ ಪರೀಕ್ಷೆಯನ್ನು ಬರೆಯುವುದರಿಂದ ನಿಮಗೆ ಹೆಚ್ಚಿನ ಅಂಕಗಳು ಲಭಿಸಿ, ನಿಮ್ಮ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ. ಸಿದ್ದಪ್ಪ ಮಾತನಾಡಿ, ತಾಲ್ಲೂಕಿನಲ್ಲಿ ಒಟ್ಟು 3123 ವಿದ್ಯಾರ್ಥಿಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ಗೈರು ಆಗಿದ್ದು, ಉಳಿದ 3121 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದಾರೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಖಜಾಂಚಿ ಶಿವಮೂರ್ತಿ, ತಾಲ್ಲೂಕು ಆಡಳಿತದ ಕಿರಣ್ ಮತ್ತಿತರರು ಇನ್ನಿತರರಿದ್ದರು.

error: Content is protected !!