ದಾವಣಗೆರೆ,ಮೇ 7-ನಗರದ ದೊಡ್ಡಪೇಟೆಯ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಇದೇ ದಿನಾಂಕ 14ರ ಶುಕ್ರವಾರ ಶ್ರೀ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು ಎಂದು ಶ್ರೀ ಬಸವೇಶ್ವರ ಸೇವಾ ಸಂಘದ ಅಧ್ಯಕ್ಷರೂ ಆದ ಹಿರಿಯ ಕೈಗಾರಿಕೋದ್ಯಮಿ ಅಥಣಿ ವೀರಣ್ಣ ತಿಳಿಸಿದ್ದಾರೆ.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಆಗಿರುವ ಲಾಕ್ ಡೌನ್ ಪರಿಣಾಮ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.