ದಾವಣಗೆರೆ, ಮಾ. 8- ನಗರದ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಆರೋಗ್ಯ ಶಿಬಿರದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಮಹೇಶ್ವರ ವಹಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ರಾಜ್ಯಕಾರ್ಯದರ್ಶಿ ಸುಧಾ ಜಯರುದ್ರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್, ಮುಖ್ಯ ಅತಿಥಿಗಳಾದ ಡಾ. ಸುಧಾ ಪಾಟೀಲ್, ವೈದ್ಯಕೀಯ ಪ್ರಕೋಷ್ಠದ ಸಹ ಸಂಚಾಲಕರಾದ ಡಾ. ನಂದಿನಿ, ಯೋಗ ಶಿಕ್ಷಕಿ ರತ್ನ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪುಷ್ಪಾ ವಾಲಿ, ನೇತ್ರ ತಜ್ಞರಾದ ಜೈಕುಮಾರ್, ದಾವಣಗೆರೆ ಉತ್ತರ ಮಂಡಲ ಅಧ್ಯಕ್ಷ ಸಂಗನಗೌಡ್ರು, ದಾವಣಗೆರೆ ಉತ್ತರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸರ್ವಮಂಗಳ, ಪ್ರಧಾನ ಕಾರ್ಯದರ್ಶಿ ಎಂ. ಕುಮಾರಿ ಉಪಸ್ಥಿತರಿದ್ದರು.