ಬಿಜೆಪಿ ಅವಧಿಯಲ್ಲಿ ಶಾಲಾ-ಕಾಲೇಜು ಅಭಿವೃದ್ಧಿಗೆ ಹೆಚ್ಚಿನ ಅನುದಾನ

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಕಂಪ್ಯೂಟರ್ ಪ್ರಯೋಗಾಲಯ ಉದ್ಘಾಟಿಸಿದ ಸಂಸದ ಸಿದ್ದೇಶ್ವರ

ದಾವಣಗೆರೆ, ಜು.24- ಬಿಜೆಪಿ ಅಧಿಕಾರವಧಿಯಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲಾಗಿದ್ದು, ಅದರಂತೆ ನಗರದ ವಿವಿಧ ಸರ್ಕಾರಿ ಕಾಲೇಜುಗಳಿಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಅಂದಾಜು 5 ಕೋಟಿ ರೂ.  ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದ್ದಾರೆ.

 ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕಂಪ್ಯೂಟರ್ ಪ್ರಯೋಗಾಲಯವನ್ನು ಇಂದು ಉದ್ಘಾಟಿಸಿ ಅವರು ಮಾತನಾಡಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ವಿವಿಧ 9 ಸರ್ಕಾರಿ ಕಾಲೇಜುಗಳಿಗೆ 4.8 ಕೋಟಿ ರೂ. ವೆಚ್ಚದಲ್ಲಿ 310 ಕಂಪ್ಯೂಟರ್, 18 ಲ್ಯಾಬ್ ಗಳ ಸ್ಥಾಪನೆ ಮತ್ತು 36 ಸ್ಮಾರ್ಟ್ ಇಂಟರಾಕ್ಟಿವ್  ಬೋರ್ಡ್ ಗಳು ಸೇರಿದಂತೆ ಇತರೆ ಪರಿಕರಗಳನ್ನು ಖರೀದಿಸಲು ಹಣ ಬಿಡುಗಡೆ ಮಾಡಲಾಗಿದೆ ಎಂದರು.

ಸರ್ಕಾರಿ ಶಾಲಾ-ಕಾಲೇಜುಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸುವಲ್ಲಿ ಶಾಸಕ ಎಸ್.ಎ. ರವೀಂದ್ರನಾಥ್ ಅವರ ಹೆಚ್ಚಿನ ಶ್ರಮವಿದೆ. ಬಡವರು, ರೈತರ ಮಕ್ಕಳಿಗೆ ಸರ್ಕಾರಿ ಶಾಲಾ-ಕಾಲೇಜುಗಳಿಂದ ಅನುಕೂಲ ವಾಗುತ್ತದೆ ಎಂಬ ಕಾರಣಕ್ಕಾಗಿ ವಿಶೇಷ ಕಾಳಜಿ ವಹಿಸಿ ಸರ್ಕಾರದ ಮೇಲೆ ಒತ್ತಡ ತಂದು ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿರುವುದು ಶ್ಲಾಘನೀಯ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ  ಶಾಸಕ ಎಸ್.ಎ. ರವೀಂದ್ರನಾಥ್ ಮಾತ ನಾಡಿ, ನಗರದಲ್ಲಿ ಸರ್ಕಾರಿ ಕಾಲೇಜುಗಳ ಪರಿಸ್ಥಿತಿ ಸರಿಯಿಲ್ಲದ್ದನ್ನು ಅರಿತು, ಸರ್ಕಾ ರದ ಮೇಲೆ ಒತ್ತಡ ತಂದು ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿರುವುದಾಗಿ ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಂಶುಪಾಲರಾದ ಡಾ. ಶಕುಂತಲಾ ಅವರು, ನಮ್ಮ ಕಾಲೇಜಿನ ಎರಡು ಕಂಪ್ಯೂಟರ್ ಪ್ರಯೋಗಾಲಯಕ್ಕೆ 40 ಕಂಪ್ಯೂಟರ್, 5 ಎಲ್‌ಡಿ. ಟಿ.ವಿ., 2 ಪ್ರಿಂಟರ್ ಮತ್ತಿತರೆ ಪರಿಕರಗಳಿಗೆ ಸೇರಿ ಕಾಲೇಜಿನ ಅಭಿವೃದ್ಧಿಗಾಗಿ ಸುಮಾರು 50 ಲಕ್ಷಕ್ಕೂ ಅಧಿಕ ಅನುದಾನವನ್ನು ಶಾಸಕರು ಮಂಜೂರು ಮಾಡಿಸಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮೇಯರ್ ಎಸ್.ಟಿ. ವೀರೇಶ್, ಕಾಲೇಜಿನ ಸಲಹಾ ಸಮಿತಿ ಸದಸ್ಯರಾದ ಡಿ.ಎಸ್. ಶಿವಶಂ ಕರ್, ದಿಳ್ಳೆಪ್ಪ, ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾ ಪುರ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಪಿ. ಮುದಜ್ಜಿ ಮಾತನಾಡಿದರು.

ಪಾಲಿಕೆ ಸದಸ್ಯರಾದ ವೀಣಾ ನಂಜಪ್ಪ, ಗೀತಾ ದಿಳ್ಳೆಪ್ಪ, ಸ್ಮಾರ್ಟ್ ಸಿಟಿ ಯೋಜನೆಯ ಮುಖ್ಯ ಇಂಜಿನಿಯರ್ ಸತೀಶ್ ಮತ್ತಿತರರಿದ್ದರು.

ಭೂಮಿಕ ಪ್ರಾರ್ಥಿಸಿದರು. ಕೆ.ಬಿ. ಸುನೀತ ಸ್ವಾಗತಿಸಿದರು. ಡಾ. ಭೀಮಣ್ಣ ನಿರೂಪಿಸಿದರು. 

error: Content is protected !!