ಹಳ್ಳಿಗಳಲ್ಲಿ ಪ್ರತಿ ಮನೆಗೂ ಕಾನೂನು ನೆರವು ತಲುಪಿಸಿ – ಅಂಗನವಾಡಿ ಕಾರ್ಯಕರ್ತೆಯರಿಗೆ ನ್ಯಾ. ರಾಜೇಶ್ವರಿ ಹೆಗಡೆ ಕರೆ

ದಾವಣಗೆರೆ, ನ.9- ಕಾನೂನಿನ ರಕ್ಷಣೆ ಮತ್ತು ನೆರವು ಜಿಲ್ಲೆಯ ಪ್ರತಿ ಹಳ್ಳಿಗಳ ಮನೆಗಳಿಗೂ ತಲುಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಬಹಳ ಪ್ರಮುಖವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರೂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರೂ ಆದ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.

ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ರಾಷ್ಟ್ರೀಯ ಮಹಿಳಾ ಆಯೋಗ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಮೂಲಕ ಮಹಿಳಾ ಸಬಲೀಕರಣ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳೊಂದಿಗೆ ಸಂಪರ್ಕದಲ್ಲಿರುವ ತಾವು ಕಾನೂನಿನ ಅರಿವು ಹೊಂದಿ, ಮುಖ್ಯ ವಾಗಿ ಅವರಿಗೆ ಕಾನೂನು ಅರಿವು ಮೂಡಿಸಿ, ಕಾನೂನು ನೆರವಿನ ಸದ್ಬಳಕೆಗೆ ಮುಂದಾಗುವಂತೆ ಜಾಗೃತಿ ಮೂಡಿಸಬೇಕು. ತಮ್ಮ ಸಂಪರ್ಕಕ್ಕೆ ಬರುವ ಜನರಿಗೂ ಸಹ ಕಾನೂನಿನ ಅರಿವು ಮೂಡಿಸುವುದರ ಜೊತೆಗೆ ಕಾನೂನಿನ ನೆರವು ಪಡೆಯುವಂತೆ ತಿಳುವಳಿಕೆ ಮೂಡಿಸಬೇಕು. ಆ ಮುಖೇನ ಕಾನೂನು ರಕ್ಷಣೆ, ನೆರವಿನಿಂದ ವಂಚಿತರಾಗುವುದನ್ನು ತಪ್ಪಿಸುವಂತೆ ಅಂಗನ ವಾಡಿ ಕಾರ್ಯಕರ್ತೆಯರಿಗೆ ಸಲಹೆ ನೀಡಿದರು.

ನಮ್ಮ ಸಂವಿಧಾನದಲ್ಲಿ ಪ್ರತಿಯೊಬ್ಬ ನಾಗ ರಿಕರು ಶಿಸ್ತುಬದ್ಧ ಜೀವನದೊಂದಿಗೆ, ಕಾನೂನು ನೆರವು ಪಡೆದು ಒಳ್ಳೆಯ ನಾಗರಿಕರಾಗಿ ಬದುಕಬೇಕು ಎಂಬ ಉದ್ದೇಶ ಹೊಂದಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಸ್ಥಾಪನೆಗೊಂಡಿದ್ದು, ಅದು ರಾಜ್ಯ, ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಬೆಳೆದಿದೆ. ಈ ಪ್ರಾಧಿಕಾರದ ಮೂಲಕ ಮಹಿಳೆ, ಮಕ್ಕಳು ಹಾಗೂ ಮೂರು ಲಕ್ಷಕ್ಕಿಂತ ಕಡಿಮೆ ಆದಾಯವುಳ್ಳವರಿಗೆ ಉಚಿತ ಕಾನೂನು ನೆರವು ನೀಡಲಾಗುವುದು ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಪಿ. ಬಸವರಾಜ್ ಅವರುಗಳು ಮಾತನಾಡಿದರು. 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾ ಖೆಯ ಉಪನಿರ್ದೇಶಕ ಕೆ.ಹೆಚ್. ವಿಜಯ ಕುಮಾರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಕೀಲರಾದ ಸಿ.ಪಿ. ಅನಿತಾ ಮಹಿಳೆ ಮತ್ತು ಕಾನೂನು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ವಿಷಯವಾಗಿ ಹಾಗೂ ಐ.ಕೆ. ಮಂಜುಳಾ ಮಹಿಳೆಯ ಆಸ್ತಿಯ ಹಕ್ಕುಗಳು, ಜೀವನಾಂಶ ವಿಷಯಗಳ ಬಗ್ಗೆ ಉಪನ್ಯಾಸ ನೀಡಿದರು.

ಅಂಗನವಾಡಿ ಕಾರ್ಯಕರ್ತರಾದ ಸೀತಾ ಪ್ರಾರ್ಥಿಸಿದರು. ಶಿಶು ಅಭಿವೃದ್ಧಿ ಯೋಜನಾಧಿ ಕಾರಿ ಧರಣಿಕುಮಾರ್ ಸ್ವಾಗತಿಸಿದರು. ಮೇಲ್ವಿಚಾರಕರಾದ ರತ್ನ ವಂದಿಸಿದರು.

error: Content is protected !!