ದಾವಣಗೆರೆ ಆಂಜನೇಯ ಬಡಾವಣೆ 5ನೇ ಕ್ರಾಸ್ ವಾಸಿ ದಾವಣಗೆರೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶಿವರಾಜ್ ಪಾಟೀಲ್ ಅವರ ತಾಯಿ ಹಾಗೂ ದಿ|| ಬಾಡದ ಕೆ.ಎಂ. ಚಂದ್ರಶೇಖರಯ್ಯ ಅವರ ಪತ್ನಿ ಶ್ರೀಮತಿ ಅನ್ನಪೂರ್ಣಮ್ಮ (81) ಅವರು ದಿನಾಂಕ 9.5.2021ರ ಭಾನುವಾರ ಬೆಳಗಿನ ಜಾವ 5 ಗಂಟೆಗೆ ನಿಧನರಾದರು. ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 9.5.2021ರ ಭಾನುವಾರ ಬೆಳಿಗ್ಗೆ 9 ಕ್ಕೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 22, 2024