ದಾವಣಗೆರೆ, ಜು.28- ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಸಮಿತಿಯು ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ನಿನ್ನೆ ಪ್ರತಿಭಟನೆ ನಡೆಸಿತು.
ಇದೇ ವೇಳೆ ಮಾತನಾಡಿದ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್, ಇದು ಅಮಾನವೀಯ ಕೃತ್ಯವಾಗಿದ್ದು, ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತ ಹದ್ದು ಎಂದು ಹೇಳಿದರು. ಮೃತಪಟ್ಟ ಬಾಲಕಿಯ ಕುಟುಂಬಕ್ಕೆ ಸರ್ಕಾರ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪ್ರದೀಪ್, ಎನ್. ಮಹಾಂತೇಶ್ ಬೇತೂರು, ದುರ್ಗಾಪ್ರಸಾದ್ ಆಲೂರು, ಹನುಮಂತ, ನೀರ್ಥಡಿ ಮಂಜುನಾಥ್, ಇ. ಶ್ರೀನಿವಾಸ್ ಸೇರಿದಂತೆ ಇತರರು ಭಾಗವಹಿಸಿದ್ದರು.