ದಾವಣ ಗೆರೆ, ಜು.28- ರಾಜ್ಯದ ನೂತನ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ಸಚಿವ ರಾಗಿದ್ದ ಸಂದರ್ಭ ದಲ್ಲಿ ನಗರದ ಕುವೆಂಪು ಕನ್ನಡ ಭವನದಲ್ಲಿ ಏರ್ಪಡಾಗಿದ್ದ ಸಮಾರಂಭವೊಂದರಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದಾಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಹೆಚ್.ಎಸ್.ಮಂಜುನಾಥ್ ಕುರ್ಕಿ ಅವರು ಶಾಲು ಹೊದಿಸಿ ಸನ್ಮಾನಿಸಿದ್ದರು. ತಾಲ್ಲೂಕು ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ, ಜಿಲ್ಲಾ ಕಸಾಪ ನಿಕಟ ಪೂರ್ವ ಅಧ್ಯಕ್ಷ ಎ.ಆರ್.ಉಜ್ಜಿನಪ್ಪ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಲೋಕಿಕೆರೆ ನಾಗರಾಜ್ ಮತ್ತಿತರರಿದ್ದರು.
December 26, 2024