ದಾವಣಗೆರೆ, ಜು.28- ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಕ್ಕೆ ಕರ್ನಾಟಕ ಪ್ರದೇಶ ರೈತ ಸಂಘ ಸಂತಸ ವ್ಯಕ್ತಪಡಿಸಿದೆ. ಮಾಯಕೊಂಡ ಹೋಬಳಿಯನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡಿಕೊಡುವಂತೆ ಹಾಗೂ ಹೊನ್ನಾಳಿ, ನ್ಯಾಮತಿ, ಸಾಗರ, ಸೊರಬ ತಾಲ್ಲೂಕುಗಳನ್ನು ಸೇರಿಸಿಕೊಂಡು ಶಿಕಾರಿಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸುವಂತೆ ಅಧ್ಯಕ್ಷ ಎಂ.ಎಸ್.ಕೆ.ಶಾಸ್ತ್ರಿ ಮತ್ತು ಪದಾಧಿಕಾರಿಗಳು ಬೊಮ್ಮಾಯಿಯವರಲ್ಲಿ ಈ ಮೂಲಕ ಮನವಿ ಮಾಡಿದ್ದಾರೆ.
December 24, 2024