ದಾವಣಗೆರೆ ವಿವಿಯಲ್ಲಿ ಕಾರ್ಯಾಗಾರ

ದಾವಣಗೆರೆ, ಮಾ.12- ದಾವಣಗೆರೆ ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ವಿಭಾಗದ ವತಿಯಿಂದ ಎಂಬಿಎ ಸಭಾಂಗಣದಲ್ಲಿ ಒಂದು ದಿನದ ಮಾನವ ಸಂಪನ್ಮೂಲ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಮಹಾರಾಜ ಸೋಪ್ಸ್ ಪ್ರೈ. ಲಿ. ವ್ಯವಸ್ಥಾಪಕ ನಿರ್ದೇಶಕ ಡಾ. ಬಿ.ಇ. ರವಿರಾಜ್ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಪದವಿ ಜೊತೆಗೆ ಫೀಲ್ಡ್‌ವರ್ಕ್ ಮತ್ತು ಪ್ರಾಯೋಗಿಕ ಅಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಸಿಂಡಿಕೇಟ್ ಸದಸ್ಯೆ ವಿಜಯಲಕ್ಷ್ಮಿ ಹಿರೇಮಠ್ ಮಾತನಾಡಿದರು. ಕುಲಸಚಿವ ಪ್ರೊ. ಗಾಯತ್ರಿ ದೇವರಾಜ್, ಎನ್. ರಾಜ, ಜಯರಾಮ್, ಅಶೋಕ್, ವಿಠ್ಠಲ್, ನಿಲ್ ವಿನ್ಸೆಂಟ್, ಪರೀಕ್ಷಾಂಗ ಕುಲಸಚಿವರಾದ ಪ್ರೊ. ಎಚ್‌.ಎಸ್. ಅನಿತಾ, ಹಣಕಾಸು ಅಧಿಕಾರಿ ಡಿ. ಪ್ರಿಯಾಂಕ ಹಾಗೂ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಪಾಲ್ಗೊಂಡಿದ್ದರು.

error: Content is protected !!