ಹರಿಹರ, ಜು.30- ನಗರದ ಪಿಡಬ್ಲ್ಯೂಡಿ ಪ್ರವಾಸಿ ಮಂದಿರದಲ್ಲಿ ಸಮಾಜ ಸೇವಕ ಎನ್.ಹೆಚ್. ಶ್ರೀನಿವಾಸ್ ನಂದಿಗಾವಿ ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಶಾಸಕ ಎಸ್. ರಾಮಪ್ಪ ಅವರು ಕಾಂಗ್ರೆಸ್ ಪಕ್ಷದ ಶಾಲು ಮತ್ತು ಪಕ್ಷದ ಧ್ವಜ ನೀಡುವುದರ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಶ್ರೀನಿವಾಸ್ ನಂದಿಗಾವಿ ಕಾಂಗ್ರೆಸ್ ಸೇರ್ಪಡೆಯಾಗಿ ದ್ದರಿಂದ ಪಕ್ಷಕ್ಕೆ ಬಲ ಬಂದಂತಾಗಿದ್ದು, ಮತ್ತಷ್ಟು ಸದೃಢವಾಗಲಿದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹರಿಹರ ತಾಲ್ಲೂಕು ಅಭಿವೃದ್ಧಿಗೆ ಹಣ ಬಿಡುಗಡೆಯಾಗಿಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ. ಆಗ ಕ್ಷೇತ್ರವನ್ನು ಅಭಿವೃದ್ಧಿ ಮಾಡಿ ತೋರಿಸುತ್ತೇನೆ ಎಂದರು.
ಶ್ರೀನಿವಾಸ್ ನಂದಿಗಾವಿ ಮಾತನಾಡಿ, ಶಾಸಕ ರಾಮಪ್ಪ ಮತ್ತು ನಮ್ಮ ಮಾವನವರಾದ ಕೆ.ಜಡಿ ಯಪ್ಪ ಮತ್ತು ಕಾಂಗ್ರೆಸ್ ಪಕ್ಷದ ಅನೇಕ ಮುಖಂ ಡರ ಮಾರ್ಗದರ್ಶನದಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಹೇಳಿದರು.
ನಗರಸಭೆ ಸದಸ್ಯ ಶಂಕರ್ ಖಟಾವ್ಕರ್ ಮಾತನಾಡಿ, ನಂದಿಗಾವಿ ಶ್ರೀನಿವಾಸ್ ಕೊರೊನಾ ಸಮಯದಲ್ಲಿ ಹರಿಹರ ತಾಲ್ಲೂಕಿನಲ್ಲಿ ಸಕ್ರಿಯವಾಗಿ ಜನ ಪರ ಸೇವೆ ಮಾಡಿದ್ದರು. ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಶ್ಲಾಘನೀಯ ಎಂದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ಕೊಂಡಜ್ಜಿ ಮಾತನಾಡಿ, ಯುವಕರು ಬಿಜೆಪಿ ಪಕ್ಷದಲ್ಲಿಯೇ ಹೆಚ್ಚು ಎಂಬ ಕಲ್ಪನೆ ಹೋಗಬೇಕಿದೆ. ಕಾಂಗ್ರೆಸ್ನಲ್ಲೂ ಯುವಕರ ಸಂಖ್ಯೆ ಹೆಚ್ಚಿದೆ. ಅವರನ್ನು ಸರಿಯಾಗಿ ಬಳಸಿಕೊಂಡಾಗ ಪಕ್ಷ ಸದೃಢವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಕಾಂಗ್ರೆಸ್ ವಕ್ತಾರ ಎಂ. ನಾಗೇಂದ್ರಪ್ಪ, ಎಪಿಎಂಸಿ ಅಧ್ಯಕ್ಷ ಮಂಜುನಾಥ್ ಪಾಟೀಲ್, ಕಾಂಗ್ರೆಸ್ ಮುಖಂಡ ಕೆ. ಜಡಿಯಪ್ಪ ಮಾತನಾಡಿದರು.
ಇದೇ ವೇಳೆ ಟಿಪ್ಪು ಸುಲ್ತಾನ್ ರಕ್ಷಣಾ ವೇದಿಕೆ ಅಧ್ಯಕ್ಷ ಅಬ್ದುಲ್ ರೆಹಮಾನ್, ಶಿವರಾಜ್ ಮಿಲಿಟರಿ, ಗೌಸ್ಪೀರ್ ಇತರರಿಗೆ ಪಕ್ಷ ಹೆಚ್ಚಿನ ಜವಾಬ್ದಾರಿ ನೀಡಿತು.
ನಗರಸಭೆ ಉಪಾಧ್ಯಕ್ಷ ಎಂ.ಎಸ್. ಬಾಬುಲಾಲ್, ಅಲಿಂ, ಇಬ್ರಾಹಿಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ, ಎಂ.ಬಿ. ಅಭಿದಾಲಿ, ಮಹಿಳಾ ಘಟಕದ ಅಧ್ಯಕ್ಷೆ ಪಾರ್ವತಮ್ಮ, ಮುಖಂಡರಾದ ಜಿಗಳಿ ಆನಂದಪ್ಪ, ಕುಂಬಳೂರು ವಾಸು, ರಾಖೇಶ್, ರೇವಣಪ್ಪ, ಅಲ್ತಾಫ್, ಗೌಸ್, ಬಿ.ಕೆ. ಮುಸ್ತಾಫ್, ಗಂಗಮ್ಮ, ಎನ್.ಹೆಚ್. ಶ್ರೀನಿವಾಸ್ ಅಭಿಮಾನಿ ಬಳಗದ ವಿಜಯಕುಮಾರ್, ದಾಸ್ ಮಂಜುನಾಥ್, ನಾರಾಯಣ, ರಾಜು ಪೈ, ವೀರೇಶ್, ಅರ್ಜುನ್ ದ್ಯಾನೇಕರ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಬುತಾಹೇರ್, ಒಬಿಸಿ ಮೋರ್ಚಾ ಅಧ್ಯಕ್ಷ ಕೆ.ಪಿ. ಗಂಗಾಧರ್ ಮಲೇಬೆನ್ನೂರು ಹಾಗು ಇತರರು ಹಾಜರಿದ್ದರು.