ಮಾಸ್ಕ್ ಧರಿಸದಿದ್ದಲ್ಲಿ ದಂಡ : ಕೂಡ್ಲಿಗಿ ತಹಶೀಲ್ದಾರ್

ಕೂಡ್ಲಿಗಿ, ಮಾ.14- ರಾಜ್ಯಾದ್ಯಂತ ಕೊರೊನಾ ಎರಡನೇ ಅಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿದೆ. ಮಾಸ್ಕ್ ಧರಿಸದಿದ್ದರೆ 100 ರೂ. ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್  ಎಸ್. ಮಹಾಬಲೇಶ್ವರ ತಿಳಿಸಿದರು.  ತಾಲ್ಲೂಕು ಮಟ್ಟದ `ಟಾಸ್ಕ್  ಪೋರ್ಸ್‌ ಸಮಿತಿ’ ಸಭೆಯಲ್ಲಿ ಅವರು ಮಾತನಾಡಿದರು. ಎರಡನೇ ಬಾರಿ ಕೊರೊನಾ ಲಸಿಕೆ ನೀಡುವ ಕಾರ್ಯ ಪ್ರಗತಿಯಲ್ಲಿದ್ದು, ಮುಂಚೂಣಿ ವಿವಿಧ ಇಲಾಖೆಗಳ ಸಿಬ್ಬಂದಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಸೂಚಿಸಿದರು. 

ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹ ಣಾಧಿಕಾರಿ ಜಿ.ಎಂ. ಬಸಣ್ಣ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಷಣ್ಮುಖ ನಾಯ್ಕ್, ಕೊರೊನಾ ನೋಡಲ್ ಅಧಿಕಾರಿ ಡಾ. ಕೊಟ್ರೇಶ್, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಸಿ. ಫಕೃದ್ಧೀನ್ ಸಾಬ್, ಸಿಪಿಐ ವಸಂತ ಅಸೋದೆ, ಶಿಶು ಅಭಿವೃದ್ಧಿ ಅಧಿಕಾರಿ ನಾಗನಗೌಡ ಸೇರಿದಂತೆ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

error: Content is protected !!