ಕೋವಿಡ್ ಕೇರ್ ಸೆಂಟರ್‌ನಲ್ಲಿದ್ದ ಇಬ್ಬರು ಯುವತಿಯರು ನಾಪತ್ತೆ

ದಾವಣಗೆರೆ, ಮೇ 19- ಇಲ್ಲಿನ ಜೆ.ಎಚ್‌. ಪಟೇಲ್‌ ಬಡಾವಣೆಯ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಪಾಸಿಟಿವ್ ಬಂದ ಪರಿಣಾಮ ದಾಖಲಾಗಿದ್ದ ಯುವತಿಯರಿಬ್ಬರು ಪರಾರಿಯಾದ ಘಟನೆ ನಡೆದಿದೆ.

ಕೊರೊನಾ ಬಂದರೂ ಲಕ್ಷಣಗಳು ಇಲ್ಲದ ಕಾರಣ ಈ ಇಬ್ಬರೂ ಯುವತಿಯರನ್ನು ಕೋವಿಡ್‌ ಕೇರ್ ಸೆಂಟರ್‌ಗೆ ದಾಖಲಿಸಲಾಗಿತ್ತು. ಸೋಮ ವಾರ ರಾತ್ರಿ ವಾಚ್‌ಮನ್‌ ಊಟಕ್ಕೆ ಕೂತಿದ್ದ ಸಮಯದಲ್ಲಿ ಪರಾರಿ ಯಾಗಿದ್ದಾರೆ. ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೋಂ ಸ್ಟೇ ನಿವಾಸಿಗಳಾಗಿದ್ದ 21 ಮತ್ತು 19 ವರ್ಷದ ಯುವತಿಯರು ಪರಾರಿಯಾದವರು. ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಅಂತರ್‌ಧರ್ಮೀಯ ಯುವಕನನ್ನು ಒಬ್ಬರು ಮದುವೆಯಾಗಿದ್ದರು. ಆದರೆ, ಆಗ 18 ವರ್ಷ ತುಂಬದೇ ಇದ್ದ ಕಾರಣ ಪ್ರಕರಣ ದಾಖಲಿಸಿ ಯುವಕನನ್ನು ಜೈಲಿಗೆ ಕಳುಹಿಸಲಾಗಿತ್ತು. ಯುವತಿ ಹೆತ್ತವರ ಮನೆಗೆ ಹೋಗಲು ಒಪ್ಪಿರಲಿಲ್ಲ.

ಅದೇ ರೀತಿ ಮತ್ತೊಬ್ಬರು 2020ರಲ್ಲಿ ತನ್ನ ಸಂಬಂಧಿ ಯುವಕನನ್ನು ಪ್ರೀತಿಸಿ ಮದುವೆಯಾಗಲು ಹೊರಟಿದ್ದರು. ಅವರಿಗೂ ಆಗ 18 ತುಂಬಿರಲಿಲ್ಲ. ಮದುವೆಯನ್ನು ತಡೆಯಲಾಗಿತ್ತು. ಆಕೆಯೂ ತಾಯಿ ಜತೆ ಹೋಗಲು ಒಪ್ಪಿರಲಿಲ್ಲ. ಹಾಗಾಗಿ ಇಬ್ಬರೂ ಹೋಂ ಸ್ಟೇನಲ್ಲಿದ್ದರು.

error: Content is protected !!