ದಾವಣಗೆರೆ, ಮೇ 19- ಅಧ್ಯಾತ್ಮದ ಶಕ್ತಿಯನ್ನು ಜನಸಾಮಾನ್ಯರಿಗೂ ಮನದಟ್ಟು ಮಾಡಿಸಿದ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಿನ್ನೆ ಆಚರಿಸ ಲಾಯಿತು. ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಸೇರಿದಂತೆ ವಿವಿಧ ಅಧಿಕಾರಿಗಳು ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಮಹಾಂತೇಶ್ ಬಿ. ದಾನಮ್ಮನವರ್, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಡಿಹೆಚ್ಒ ಡಾ. ನಾಗರಾಜ್, ಡಿಎಸ್ ಡಾ. ಜಯಪ್ರಕಾಶ್ ಜಿಲ್ಲಾ ಸರ್ವೇಕ್ಷಾಣಾಧಿಕಾರಿ ಡಾ. ರಾಘವನ್, ಆರ್ಸಿಹೆಚ್ಒ ಡಾ. ಮೀನಾಕ್ಷಿ, ಡಾ. ಯತೀಶ್, ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ ಚಿಂತಾಲ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಹಾಗೂ ಇತರರು ಉಪಸ್ಥಿತರಿದ್ದರು.