ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ - Janathavaniದಾವಣಗೆರೆ, ಮಾ.13- ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ತಾಲ್ಲೂಕಿನ ಅಣಜಿ ಗ್ರಾಮದ ಶ್ರೀ ಹ್ಯಾಳೇದ ವೀರಪ್ಪ ಶಿವಲಿಂಗಪ್ಪ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಎ.ಎಸ್‌. ಸಿಂಧು 1500 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಹೆಚ್‌.ಎಸ್‌. ಪಲ್ಲವಿ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜು ಮತ್ತು ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ. 

error: Content is protected !!