ದಾವಣಗೆರೆ, ಮಾ.15- ಪಾಲಿಕೆಯ 22ನೇ ವಾರ್ಡ್ ಉಪ ಚುನಾವಣೆ ಅಭ್ಯರ್ಥಿಯನ್ನಾಗಿ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮುಜಾಹಿದ್ ಅವರನ್ನು ಘೋಷಣೆ ಮಾಡಬೇಕೆಂದು ಕಿಸಾನ್ ಕಾಂಗ್ರೆಸ್ ಜಿಲ್ಲಾ ಸಮಿತಿ ಪ್ರಧಾನ ಕಾರ್ಯ ದರ್ಶಿ ಪ್ರವೀಣ್ ಕುಮಾರ್ ಎಸ್.ಕೆ. ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಪಕ್ಷಕ್ಕೆ ಸೇವೆ ಸಲ್ಲಿಸಿರುವ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಸೇವೆ ಸಲ್ಲಿಸಲು ಅವಕಾಶ ನೀಡಬೇಕೆಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸುರೇಶ್ ಜಾಧವ್, ಹರೀಶ್, ಮೊಹಮ್ಮದ್ ಜಿಕ್ರಿಯಾ ಉಪಸ್ಥಿತರಿದ್ದರು.