ದಾವಣಗೆರೆ, ಆ.2- ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷರಾಗಿ ನಗರದ ಆವರಗೆರೆ ಹೆಚ್.ಜಿ. ಉಮೇಶ್ ಆಯ್ಕೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಇಂದು ನಡೆದ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ರಾಜ್ಯ ಸಮಿತಿ ಸಭೆಯಲ್ಲಿ ಈ ಈ ಆಯ್ಕೆ ನಡೆಯಿತು. ಸಂಘದ ರಾಜ್ಯಾಧ್ಯಕ್ಷರಾಗಿ ಇವರೆಗೂ ಕಾರ್ಯನಿರ್ವಹಿಸುತ್ತಿದ್ದ ಹೆಚ್.ಕೆ.ರಾಮಚಂದ್ರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ಈ ಆಯ್ಕೆ ಮಾಡಲಾಯಿತು. ಉಮೇಶ್ ಅವರನ್ನು ಎಐಟಿಯುಸಿ ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ರಾಘವೇಂದ್ರ ನಾಯರಿ ಅಭಿನಂದಿಸಿದ್ದಾರೆ.