ದಾವಣಗೆರೆ, ಮೇ 23- ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಪ್ರೊ. ಲಿಂಗಣ್ಣ ಹಾಗೂ ಬಯಲುಸೀಮೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಣಬೇರು ಜೀವನಮೂರ್ತಿ ಅವರು ಅಣಬೇರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಕ್ಷೇತ್ರದ ಕೆಲ ಹಳ್ಳಿಗಳಿಗೆ ಶಾಸಕರು ನಾಮಕಾವಸ್ಥೆ ಭೇಟಿ ನೀಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಣಬೇರು ಗ್ರಾಮ ಪಂಚಾಯ್ತಿ ಕಾರ್ಯಾಲಯಕ್ಕೆ ಇಂದು ಭೇಟಿ ನೀಡಿ, ಜನಪ್ರತಿನಿಧಿಗಳು ಹಾಗೂ ಗ್ರಾಮದ ಮುಖಂಡರ ಜೊತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಶ್ಯಾಗಲೆ ದೇವೇಂದ್ರಪ್ಪ, ಸಿಪಿಐ ಮಂಜುನಾಥ್ ಮತ್ತಿತರರು ಹಾಜರಿದ್ದರು.
December 27, 2024