ಹೊನ್ನಾಳಿ ಶಾಸಕ ರೇಣುಕಾಚಾರ್ಯರ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಶ್ಲ್ಯಾಘನೆ
ಹೊನ್ನಾಳಿ, ಮೇ 31- ತಾಲ್ಲೂಕಿನ ಅರಬಗಟ್ಟೆಯಲ್ಲಿರುವ ವಸತಿ ಶಾಲೆಯಲ್ಲಿ ನಿರ್ಮಾಣ ಮಾಡಿರುವ ಕೋವಿಡ್ ಕೇರ್ ಸೆಂಟರನ್ನು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸೋಮವಾರ ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಸಚಿ ವರು. ಅರಬ ಗಟ್ಟೆಯಲ್ಲಿ ಅತ್ಯಂತ ಸುಸಜ್ಜಿತ ಕೋವಿಡ್ ಕೇರ್ ಸೆಂಟರನ್ನು ರೇಣುಕಾ ಚಾರ್ಯ ಕೇವಲ 48 ಘಂಟೆಯಲ್ಲಿ ನಿರ್ಮಾಣ ಮಾಡಿದ್ದು, ನಿಜಕ್ಕೂ ಇದು ಮಾದರಿ ಕೋವಿಡ್ ಕೇರ್ ಆಗಿರುವುದಕ್ಕೆ ರೇಣುಕಾಚಾರ್ಯ ಅವರ ಇಚ್ಚಾಶಕ್ತಿ ಕಾರಣ ಎಂದರು.
ಸೋಂಕಿತರ ಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು, ಆ ನಿಟ್ಟಿನಲ್ಲಿ ಅವಳಿ ತಾಲ್ಲೂಕಿನ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆಂದರು.
ಶಾಸಕ ರೇಣುಕಾಚಾರ್ಯ ಮಾತನಾಡಿ, ಒಂದು ಕೋಟಿ ವೆಚ್ಚದಲ್ಲಿ ಆಸ್ಪತ್ರೆಯ ಆವರಣದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣವಾಗುತ್ತಿದ್ದು, ಸದ್ಯ ಆಸ್ಪತ್ರೆಯಲ್ಲಿ 70 ಆಮ್ಲಜನಕ ಸಾಂದ್ರಕಗಳು ಲಭ್ಯವಿದ್ದು, ಬೆಂಗಳೂರಿನ ನಮ್ಮ ಸ್ನೇಹಿತರು 10 ಆಮ್ಲಜನಕ ಸಾಂದ್ರಕಗಳನ್ನು ನೀಡುತ್ತಿದ್ದು, ಒಟ್ಟು 80 ಆಮ್ಲಜನಕ ಸಾಂದ್ರಕಗಳು ಲಭ್ಯವಿದ್ದು ಯಾವುದೇ ಕಾರಣಕ್ಕೂ ಆಕ್ಸಿಜನ್ ಕೊರತೆಯಾಗುವುದಿಲ್ಲ. 800 ಬೆಡ್‍ಗಳ ಕೋವಿಡ್ ಕೇರ್ ಸೆಂಟರ್ ನಿರ್ಮಿಸಿದ್ದು, ಅಗತ್ಯ ಬಿದ್ದರೆ ಒಂದು ಸಾವಿರ ಬೆಡ್‍ಗಳ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಮಾಡುವುದಾಗಿ ತಿಳಿಸಿದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಎಸ್ಪಿ ಹನುಮಂತರಾಯ, ಸಿಇಓ ಡಾ. ವಿಜ ಯಮಾಹಂತೇಶ್ ದಾನಮ್ಮನವರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗರಾಜ್, ಉಪ ವಿಭಾಗಾಧಿಕಾರಿ ಮಮತ ಹೊಸಗೌಡರ್, ತಹಶೀಲ್ದಾರ್‍ಗಳಾದ ಬಸನಗೌಡ್ ಕೋಟೂರ, ತನುಜಾ ಟಿ ಸವದತ್ತಿ, ಸಿಪಿಐ ದೇವರಾಜ್, ಇಓ ಗಳಾದ ಗಂಗಾಧರ್ ಮೂರ್ತಿ, ರಾಮ ಭೋವಿ, ತಾಲ್ಲೂಕು ಆರೋಗ್ಯಾಧಿಕಾರಿ ಕೆಂಚಪ್ಪ ಇನ್ನಿತರರಿದ್ದರು.