ಟಾಸ್ಕ್‌ಫೋರ್ಸ್‌ ರಚಿಸಿ ಅಕ್ರಮ ಗಣಿಗಾರಿಕೆಗೆ ಬ್ರೇಕ್

ಹರಪನಹಳ್ಳಿ, ಮಾ.18- ಅಕ್ರಮ ಗಣಿಗಾರಿಕೆ ತಡೆಗಟ್ಟಲು  ತಾಲ್ಲೂಕು ಮಟ್ಟದಲ್ಲೂ ಮೈನಿಂಗ್ ಟಾಸ್ಕ್ ಫೋರ್ಸ್ ಸಮಿತಿಯನ್ನು ಶೀಘ್ರ ರಚನೆ ಮಾಡಲಾಗುವುದು ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ತಿಳಿಸಿದ್ದಾರೆ.

ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಪೋರ್ಸ್‌ ರಚನೆಯಾದ ನಂತರ ಅಕ್ರಮ ಗಣಿಗಾರಿಕೆ ಮೇಲೆ ಹದ್ದಿನ ಕಣ್ಣು ಇಡಲಾಗುವುದು. ನಕಲಿ ಚಿನ್ನ ನೀಡಿ ಮೋಸ ಮಾಡುವವರ ವಿರುದ್ಧ ನಿಗಾ ಇಡಲಾಗಿದೆ. ಇಂತಹ ಪ್ರಕರಣಗಳನ್ನು  ಶಾಶ್ವತವಾಗಿ ಮಟ್ಟ ಹಾಕಲಾಗುವುದು ಎಂದು ಅವರು ಹೇಳಿದರು.

ಕನ್ನನಾಯಕನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಗಲಾಟೆಗೆ ಸಂಬಂಧ ಪಟ್ಟಂತೆ ಉತ್ತರಿ ಸಿದ ಅವರು ಪ್ರಕರಣ ದಾಖಲಾಗಿದೆ, ಮುಖ್ಯ ಆರೋಪಿತರ ಬಂಧನವಾಗಿದೆ. ಶೀಘ್ರ ಆ ಗ್ರಾಮದಲ್ಲಿ ಡಿವೈಎಸ್ಪಿ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಸಲಾಗುವುದು ಹಾಗೂ ಅಲ್ಲಿಗೆ ರೆಗ್ಯುಲರ್ ಬೀಟ್ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಅಕ್ರಮ ಮರಳು ಸರಬರಾಜಿನ ಕುರಿತು ಹೇಳಿದ ಅವರು ರೆಗ್ಯುಲರ್ ಪ್ರಕರಣ ದಾಖಲು ಮಾಡುತ್ತಿದ್ದೇವೆ. ಆ ಕುರಿತು ನಿಗಾ ಇಟ್ಟಿದ್ದೇವೆ ಎಂದು ಅವರು ಹೇಳಿದರು.

ಹರಪನಹಳ್ಳಿ ಪಟ್ಟಣದ ಪೊಲೀಸ್ ಠಾಣೆ ಮೇಲ್ದರ್ಜೆಗೇರಿದ್ದು, ಶೀಘ್ರ ಅನುಷ್ಠಾನಗೊಳ್ಳುತ್ತದೆ ಎಂದು ಅವರು ಮಟ್ಕಾ ಹಾವಳಿ ತಡೆಗಟ್ಟಲಾಗುವುದು ಎಂದು ತಿಳಿಸಿದರು.

ಡಿವೈಎಸ್ಪಿ ಹಾಲಮೂರ್ತಿರಾವ್ , ಸಿಪಿಐ ನಾಗರಾಜ ಕಮ್ಮಾರ, ಪಿಎಸ್‌ಐ ಪ್ರಕಾಶ್ ಹಾಗೂ  ಪೊಲೀಸ್ ಸಿಬ್ಬಂದಿ ಹಾಜರಿದ್ದರು.  

error: Content is protected !!