ಇಂಡಿಯಾ ರಿಸರ್ವ್ ಬೆಟಾಲಿಯನ್ ಸ್ಥಾಪನೆಗೆ ಸಿದ್ದೇಶ್ವರ ಆಗ್ರಹ

ದಾವಣಗೆರೆ, ಮಾ.19- ಹರಪನಹಳ್ಳಿ ತಾಲ್ಲೂಕಿನಲ್ಲಿ ಕೇಂದ್ರ ಗೃಹ ಇಲಾಖೆ ವತಿಯಿಂದ ಇಂಡಿಯಾ ರಿಸರ್ವ್ ಬೆಟಾಲಿಯನ್ ಸ್ಥಾಪನೆ ಮಾಡು ವಂತೆ ಸಂಸದ ಜಿ.ಎಂ.ಸಿದ್ದೇಶ್ವರ ಲೋಕಸಭಾ ಅಧಿವೇಶನದ ಶೂನ್ಯ ವೇಳೆ ಯಲ್ಲಿ ವಿಷಯ ಪ್ರಸ್ತಾಪಿಸಿ, ಲೋಕಸಭಾ ಸ್ಪೀಕರ್ ಮುಖಾಂತರ ಗೃಹ ಸಚಿವರ ಗಮನ ಸೆಳೆದರು. ಕರ್ನಾಟಕದಲ್ಲಿ ಈಗಿರುವ ಕೆ.ಎಸ್.ಆರ್.ಪಿ. ತುಕಡಿಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಭಾಯಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿವೆ. ಹೀಗಿದ್ದಾಗ್ಯೂ ಕೂಡ ಈಗಿರುವ  11 ಕೆ.ಎಸ್.ಆರ್.ಪಿ. ತುಕುಡಿಗಳು ನಕ್ಸಲ್ ಚಟುವಟಿಕೆ ಹಾಗೂ ಉಗ್ರವಾದಿಗಳ ಉಪಟಳಗಳಂ ತಹ ಸಂದರ್ಭದಲ್ಲಿ ಸುವ್ಯವಸ್ಥೆ ನಿಭಾಯಿಸಲು ಸಾಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಒಂದು ಇಂಡಿಯಾ ರಿಸರ್ವ್ ಬೆಟಾಲಿಯನ್ ಮಂಜೂರು ಮಾಡುವಂತೆ ರಾಜ್ಯ ಸರ್ಕಾರ ಪ್ರಸ್ಥಾವನೆ ಸಲ್ಲಿಸಿದೆ. 

ಇಂಡಿಯಾ ರಿಸರ್ವ್ ಬೆಟಾಲಿಯನ್ ಸ್ಥಾಪನೆ ಮಾಡಲು ದಾವಣಗೆರೆ ಲೋಕಸಭಾ ಕ್ಷೇತ್ರದ ಹರಪನಹಳ್ಳಿ ತಾಲ್ಲೂಕಿನಲ್ಲಿ ಅಗತ್ಯವಾಗಿರುವ ಸುಮಾರು 100 ಎಕರೆ ಜಮೀನನ್ನೂ ಸಹ ಗುರುತಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮತ್ತು ನಾನು ಹಲವಾರು ಬಾರಿ ಗೃಹ ಇಲಾಖೆಗೆ  ಪತ್ರ ವ್ಯವಹಾರ ನಡೆಸಿದರೂ ಕೂಡ ಇಲ್ಲಿಯವರೆಗೆ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿರುವುದಿಲ್ಲ. ದಾವಣಗೆರೆ ಲೋಕಸಭಾ ಕ್ಷೇತ್ರ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು, ಈ ಹಿಂದೆ ಕೋಮುಗಲಭೆಗಳು ಸಂಭವಿಸಿದ ಉದಾಹರ ಣೆಗಳಿವೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಗೃಹ ಇಲಾಖೆ ಯಲ್ಲಿ ಬಾಕಿ ಉಳಿದಿರುವ ಈ ಪ್ರಸ್ತಾವನೆಗೆ ಅನುಮೋದನೆ ನೀಡುವ ಮೂಲಕ ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹರಪನಹಳ್ಳಿ ತಾಲ್ಲೂಕಿ ನಲ್ಲಿ ಇಂಡಿಯಾ ರಿಸರ್ವ್ ಬೆಟಾಲಿಯನ್ ಸ್ಥಾಪನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಸಂಸತ್ತಿನಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ ಮನವಿ ಮಾಡಿದರು.

error: Content is protected !!