ದಾವಣಗೆರೆ, ಜೂ.16- ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು ನೀಡಿರುವ ಕೋವಿಡ್ ಉಚಿತ ಲಸಿಕೆ ಶಿಬಿರವನ್ನು ಬಿ.ಎಸ್. ಚನ್ನಬಸಪ್ಪ ಅಂಡ್ ಸನ್ಸ್ ನ ಸಿಬ್ಬಂದಿ ವರ್ಗ ಮತ್ತು ಅವರ ಕುಟುಂಬ ವರ್ಗದವರಿಗೆ ಡಿ. ದೇವರಾಜ ಅರಸು ಬಡಾವಣೆ ಬಿ ಬ್ಲಾಕ್ ನಲ್ಲಿರುವ ಶಿವ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಇಂದು ನಡೆಸಲಾಯಿತು.
ಹರಿಹರದ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಸ್ವತಃ 2ನೇ ಡೋಸ್ ಲಸಿಕೆಯನ್ನು ಪಡೆಯುವುದರ ಮೂಲಕ ಶಿಬಿರವನ್ನು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಡಾ. ಶಾಮನೂರು ಶಿವಶಂಕರಪ್ಪ ಅವರ 90ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಜವಳಿ ಉದ್ಯಮಿ ಬಿ.ಸಿ. ಉಮಾಪತಿ ಅವರ ನೇತೃತ್ವದಲ್ಲಿ ಶಿಬಿರ ಏರ್ಪಾಡಾಗಿತ್ತು.
ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಮಹಾಂತೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಚಂದ್ರಶೇಖರ ಪೂಜಾರ್, ಬಿಎಸ್ ಸಿಯ ಬಿ.ಸಿ.ಶಿವಕುಮಾರ್, ಬಿ.ಯು.ಚಂದ್ರಶೇಖರ್, ಶೇಖರ್, ವಿವೇಕ್ ಮತ್ತಿತರರು ಉಪಸ್ಥಿತರಿದ್ದರು.