ಯೋಗ ಕಾರ್ಯಕ್ರಮದಲ್ಲಿ ವೈದ್ಯಗುರು ಚನ್ನಬಸವಣ್ಣ ಅವರೊಂದಿಗೆ ಸಂಸದ ಜಿ.ಎಂ. ಸಿದ್ದೇಶ್ವರ, ಪತ್ನಿ ಗಾಯತ್ರಿ ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಎಸ್ಪಿ ರಿಷ್ಯಂತ್ ಸೇರಿದಂತೆ ಇತರರು ಯೋಗಾಸನ ಮಾಡಿದರು.
ದಾವಣಗೆರೆ, ಜೂ.21- ಆರೋಗ್ಯವನ್ನು ಕಾಪಾಡಿ ಕೊಳ್ಳುವ ನಿಟ್ಟಿನಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತದೆ. ನಿರಂತರ ಯೋಗಾಭ್ಯಾಸದಿಂದ ಉಸಿರಾಟ ಸರಾಗವಾಗುತ್ತದೆ. ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ಪ್ರತಿಯೊಬ್ಬರೂ ಯೋಗಾಸನದಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಬೇಕು ಎಂದು ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ ಕರೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ವರದಿಗಾರರ ಕೂಟ ಹಾಗೂ ಜಿಲ್ಲಾ ಯೋಗ ಒಕ್ಕೂಟದ ಆಶ್ರಯದಲ್ಲಿ ಇಂದು ನಗರದ ಜಿ.ಎಂ.ಐ.ಟಿ ಕಾಲೇಜಿನ ಆವರಣದಲ್ಲಿ ಆಯೋಜಿಸ ಲಾಗಿದ್ದ 7ನೇ ಅಂತರರಾಷ್ಟ್ರೀಯ ಯೋಗ ದಿನಾ ಚರಣೆ ಕಾರ್ಯಕ್ರಮಕ್ಕೆ ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿಯವರು ಯೋಗಾ ಸನದ ಮಹತ್ವವನ್ನು ಇಡೀ ವಿಶ್ವಕ್ಕೇ ಅರ್ಥೈಸಬೇಕು ಎಂಬ ಮುಂದಾಲೋಚನೆಯಿಂದ ಯೋಗ ದಿನಾಚರಣೆ ಬಗ್ಗೆ ಮನವರಿಕೆ ಮಾಡಬೇಕು ಎಂಬ ಹಿನ್ನೆಲೆಯಲ್ಲಿ ಏಳು ವರ್ಷಗಳ ಹಿಂದೆ ಜೂನ್ 21 ಅಂತರರಾಷ್ಟ್ರೀಯ ಯೋಗ ದಿನಾಚರಣೆ ಎಂದು ಘೋಷಣೆ ಮಾಡಿದ್ದು, ಅನೇಕ ದೇಶಗಳು ಇಂದು ಯೋಗ ದಿನಾಚರಣೆಯನ್ನು ಆಚರಿಸುತ್ತಿವೆ. ಇದು ನಮ್ಮ ದೇಶದ ಹಿರಿಮೆ ಎಂದು ತಿಳಿಸಿದರು.
2-3 ದಿನಗಳಲ್ಲಿ ಜಿಲ್ಲೆ ಅನ್ಲಾಕ್: ಸಂಸದ ವಿಶ್ವಾಸ
ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಶೇ.5 ಕ್ಕಿಂತ ಹೆಚ್ಚಿರುವುದರಿಂದ ಲಾಕ್ಡೌನ್ ಅನ್ನು ಮುಂದುವರೆಸಲಾಗಿದೆ. ಇನ್ನೂ ಎರಡು ಮೂರು ದಿನಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗಲಿದ್ದು, ನಮ್ಮ ಜಿಲ್ಲೆಯನ್ನು ಅನ್ಲಾಕ್ ಮಾಡಲಾಗುವುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆದರೆ, ಸಾರ್ವಜನಿಕರು ಕೊರೊನಾ ಸೋಂಕು ಕಡಿಮೆಯಾಗಿದೆ ಎಂದು ಕೋವಿಡ್ ನಿಯಮಗಳನ್ನು ನಿರ್ಲಕ್ಷಿಸುವಂತಿಲ್ಲ. ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿ 3 ನೇ ಅಲೆಯ ಎಚ್ಚರಿಕೆ ನೀಡಿರುವುದರಿಂದ ಜನರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸೋಂಕಿನ ಕುರಿತು ನಾವು ಎಚ್ಚೆತ್ತುಕೊಳ್ಳಬೇಕು ಎಂದು ಸಲಹೆ ನೀಡಿದರು.
ವೈದ್ಯಗುರು ಚನ್ನಬಸವಣ್ಣ ಮಾತನಾಡಿ, ಯೋಗವನ್ನು ಒಂದು ದಿನಕ್ಕೆ ಸೀಮಿತಗೊಳಿಸದೆ ನಿರಂತರವಾಗಿ ಅಭ್ಯಾಸ ಮಾಡುವುದರಿಂದ ಶ್ವಾಸಕೋ ಶದ ಶಕ್ತಿ ವೃದ್ಧಿಯಾಗುತ್ತದೆ ಹಾಗೂ ಕೊರೊನಾ ದಂತಹ ಸೋಂಕುಗಳ ವಿರುದ್ದ ಹೋರಾಡುವ ಸಾಮರ್ಥ್ಯ ಹೆಚ್ಚುತ್ತದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಯೋಗವನ್ನೂ ಮನೆಯಲ್ಲಿಯೇ ಆಚರಿಸಿ. ಯೋಗ ಮಾಡುವ ಮೂಲಕ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯವನ್ನು ಸಹ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಸಂಸದ ಜಿ.ಎಂ.ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ್ ಸೇರಿದಂತೆ ಇತರೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಯೋಗಾಭ್ಯಾಸ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಪಾಲಿಕೆ ಮೇಯರ್ ಎಸ್.ಟಿ.ವೀರೇಶ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಉಪವಿಭಾಗಾಧಿಕಾರಿ ಶ್ರೀಮತಿ ಮಮತಾ ಹೊಸಗೌಡರ್, ದೂಡಾ ಆಯುಕ್ತ ಬಿ.ಟಿ.ಕುಮಾರಸ್ವಾಮಿ, ತಹಶೀಲ್ದಾರ್ ಬಿ.ಎನ್. ಗಿರೀಶ್, ಸ್ಮಾರ್ಟ್ ಸಿಟಿ ಎಂಡಿ ರವೀಂದ್ರ ಮಲ್ಲಾಪುರ, ಡಿಹೆಚ್ಒ ಡಾ.ನಾಗರಾಜ್, ಆಯುಷ್ ಅಧಿಕಾರಿ ಡಾ.ಶಂಕರೇಗೌಡ, ಜಿಲ್ಲಾ ಯೋಗ ಒಕ್ಕೂಟದ ವಾಸುದೇವ ರಾಯ್ಕರ್, ಸಂಸದರ ಪತ್ನಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ ಪಾಲ್ಗೊಂಡಿದ್ದರು.