ಅಪಘಾತದಿಂದ ಸಾವು : ಪೊಲೀಸರ ಮೇಲೆ ಹಲ್ಲೆ

ಮೈಸೂರು, ಮಾ. 22 –  ಸಂಚಾರಿ ಪೊಲೀಸರು ತಪಾಸಣೆ ನಡೆಸುವ ವೇಳೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರಿನ ವಿ.ವಿ.ಪುರಂ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಹಿನಕಲ್ ರಿಂಗ್ ರಸ್ತೆಯಲ್ಲಿ ಸಂಚಾರಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ನಂತರದ ಜನರ ಆಕ್ರೋಶಕ್ಕೆ ಸಿಲುಕಿ ಇಬ್ಬರು ಪೊಲೀಸರು ಗಾಯಗೊಂಡ ಘಟನೆಯೂ ನಡೆದಿದೆ.

ವಿವಿ ಪುರಂ ಸಂಚಾರಿ ಪೊಲೀಸರು ಬೈಕ್ ಸವಾರನನ್ನು ತಪಾಸಣೆ ನಡೆಸಲು ಮುಂದಾದಾಗ ಆತ ಆಯತಪ್ಪಿ ಕೆಳ ಬಿದ್ದ ಬೈಕ್ ಸವಾರನ ಮೇಲೆ ಹಿಂಬದಿಯಿಂದ ಬಂದ ವ್ಯಾನ್ ಡಿಕ್ಕಿ ಹೊಡೆದು ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.  

ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಪೊಲೀಸರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೈಕ್ ಸವಾರ ಹೆಲ್ಮೆಟ್ ಧರಿಸಿದ್ದರೂ ಪೋಲಿಸರು ಸವಾರನನ್ನು ಅಡ್ಡಗಟ್ಟಿದ್ದಾರೆ. ಈ ವೇಳೆ ಪೊಲೀಸ್ ಪೇದೆ ಲಾಠಿ ಬೀಸಿದ ಪರಿಣಾಮ ಬೈಕ್ ನ ಹ್ಯಾಂಡಲ್ ಗೆ ಲಾಠಿ ಸಿಲುಕಿ ಕೆಳ ಬಿದ್ದು ಬೈಕ್ ಸವಾರ ದೇವರಾಜು ಸಾವನ್ನಪ್ಪಿದ್ದಾನೆಂದು ಸ್ಥಳೀಯರು ಆರೋಪಿಸಿದ್ದಾರೆ. 

ಬೈಕ್ ತಪಾಸಣೆ ವೇಳೆ ವ್ಯಕ್ತಿ ಬಿದ್ದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸ್ ಗಸ್ತು ವಾಹನ ಜಖಂಗೊಳಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಪೊಲೀಸರ ಮೇಲೆ ಜನ ನಡೆಸಿದ ಹಲ್ಲೆಯ ದೃಶ್ಯಗಳು ವೈರಲ್ ಆಗಿವೆ. ಈ ವೇಳೆ ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆಯಿತು. ಸ್ಥಳಕ್ಕೆ ಡಿಸಿಪಿ ಗೀತಾ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. 

error: Content is protected !!