ಜಗಳೂರು ಶಾಸಕ ರಾಮಚಂದ್ರ ಕರೆ
ಜಗಳೂರು, ಜೂ.24- ಪೋಷಕರು ಖಾಸಗಿ ಶಾಲೆಗಳ ಮೊರೆ ಹೋಗಿ ಆರ್ಥಿಕ ಹೊರೆ ಮಾಡಿಕೊಳ್ಳದೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ, ಉಚಿತ ಶೈಕ್ಷಣಿಕ ಸೌಲಭ್ಯ ಕೊಡಿಸಲು ಮುಂದಾಗಿ ಎಂದು ಶಾಸಕ ಎಸ್.ವಿ. ರಾಮಚಂದ್ರ ಕರೆ ನೀಡಿದರು.
ನಿಂಗನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಛೇರಿ ಸಂಯು ಕ್ತಾಶ್ರಯ ದಲ್ಲಿ ಪೋಷಕರು ಸರ್ಕಾರಿ ಶಾಲೆ ಗಳಿಗೆ ಮಕ್ಕಳನ್ನು ತಪ್ಪದೇ ಸೇರಿಸಿ ಎಂಬ ದಾಖಲಾತಿ ಆಂದೋಲನದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಭವಿಷ್ಯದ ನಾಯಕರು ಹುಟ್ಟುವಂತಹ ಶಕ್ತಿಯಿರುವುದೇ ಸರ್ಕಾರಿ ಶಾಲೆಗಳಲ್ಲಿ. ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಜೊತೆಗೆ ಊಟ, ವಸತಿ, ಪುಸ್ತಕ, ಬಟ್ಟೆ, ಸೈಕಲ್ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡಿ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ತಪ್ಪದೇ ಸೇರಿಸಿ ಎಂದು ಮನವಿ ಮಾಡಿದರು.
ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜಪ್ಪ ದಿದ್ದಿಗಿ ಮಾತನಾಡಿ, ತಾಲ್ಲೂಕಿನ ಎಲ್ಲಾ ಶಾಲೆಗಳಲ್ಲಿ ದಾಖಲಾತಿ ಪ್ರಾರಂಭ ವಾಗಿದ್ದು, ಕೊರೊನಾ ಮಧ್ಯದಲ್ಲಿಯೂ ಸಹ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲಾಗಿದೆ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಮಹೇಶ್, ದಾವಣಗೆರೆ ವಿವಿ ಸೆನೆಟ್ ಸದಸ್ಯ ಕೃಷ್ಣ ಮೂರ್ತಿ, ಜಿ.ಪಂ. ಮಾಜಿ ಸದಸ್ಯ ಹೆಚ್. ನಾಗರಾಜ್, ಗ್ರಾ.ಪಂ. ಅಧ್ಯಕ್ಷೆ ಚೌಡಮ್ಮ, ಗ್ರಾ.ಪಂ. ಮಾಜಿ ಅಧ್ಯಕ್ಷ ಮಂಜಣ್ಣ, ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ್, ಗ್ರಾ.ಪಂ. ಸದಸ್ಯೆ ರೂಪಾ, ಶಾಲಾ ಮುಖ್ಯ ಶಿಕ್ಷಕ ಪ್ರಕಾಶ್, ಶಿಕ್ಷಕರಾದ ಹುಸೇನ್ ಷರೀಫ್, ಹನುಮಕ್ಕ, ಭವ್ಯ, ಗ್ರಾಮದ ಮುಖಂಡ ರಾದ ರವಿ, ಓಬಣ್ಣ ಸಮಾರಂಭದಲ್ಲಿದ್ದರು.