ಅಕ್ಟೋಬರ್ 6 ರಿಂದ ಶರಣ ಸಂಸ್ಕೃತಿ ಉತ್ಸವ

ಅಕ್ಟೋಬರ್ 6 ರಿಂದ ಶರಣ ಸಂಸ್ಕೃತಿ ಉತ್ಸವ - Janathavaniಚಿತ್ರದುರ್ಗ, ಜೂ.27 – ಇಲ್ಲಿನ ಮುರುಘಾ ಮಠದಿಂದ ಬರುವ ಅಕ್ಟೋ ಬರ್ 6 ರಿಂದ 17ರವರೆಗೆ ಶರಣ ಸಂಸ್ಕೃತಿ ಉತ್ಸವವನ್ನು ಆಯೋಜಿಸಲು ತೀರ್ಮಾನಿ ಸಲಾಗಿದೆ ಎಂದು ಶ್ರೀ ಡಾ. ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ಶ್ರೀಮಠದಲ್ಲಿ ಮೊನ್ನೆ ನಡೆದ ಶರಣ ಸಂಸ್ಕೃತಿ ಉತ್ಸವದ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿಯ ಉತ್ಸವದಲ್ಲಿ ವಿಶೇಷ ಪ್ರವಚನ, ವೀರಗಾಸೆ, ಭಜನೆ, ಜಾನಪದ ಸ್ಪರ್ಧೆಗಳು ಹಾಗು 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿರುವ ಈ ಸಂದರ್ಭದಲ್ಲಿ ಅದರ ಸವಿನೆನಪಿನಲ್ಲಿ ಇಡೀ ಶರಣ ಸಂಸ್ಕೃತಿ ಉತ್ಸವವನ್ನು ಅತ್ಯಂತ ರಚನಾತ್ಮಕವಾಗಿ ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.

ಉತ್ಸವವನ್ನು ಯಶಸ್ವಿಯಾಗಿ ನೆರವೇರಿಸಲು ಉತ್ಸವ ಸಮಿತಿ ಗೌರವಾಧ್ಯಕ್ಷರಾದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಶ್ರೀ ಶಿವಬಸವ ಸ್ವಾಮೀಜಿ, ಶ್ರೀ ಬಸವಕುಮಾರ ಸ್ವಾಮೀಜಿ, ಶ್ರೀ ಬಸವ ಪ್ರಭು ಸ್ವಾಮೀಜಿ ಹಾಗು ವಿವಿಧ ಸ್ವಾಮಿಗಳಿಂದ 70 ಲಕ್ಷ ರೂ., ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ 10 ಲಕ್ಷ ರೂ.ಗಳು ಸೇರಿದಂತೆ ಶಂಕರಮೂರ್ತಿ, ಬಸವರಾಜ ಪಾಟೀಲ್, ಪಟೇಲ್ ಶಿವಕುಮಾರ್, ಸಿದ್ದಾಪುರ ನಾಗಣ್ಣ, ಎಲ್.ಬಿ. ರಾಜಶೇಖರ್, ತಾಜ್‍ಪೀರ್, ಮಹಡಿ ಶಿವಮೂರ್ತಿ, ಜಿ.ಟಿ. ಸುರೇಶ್, ಭರಮಸಾಗರ ಮಹಾಂತೇಶ್, ಮರುಳಾರಾಧ್ಯ, ಮಾರುತೇಶ್ ಹೊಳಲ್ಕೆರೆ ಮತ್ತು ಮಾದಾರ ಸಮಾಜದ ತಿಪ್ಪೇಸ್ವಾಮಿ, ಶ್ರೀಮತಿ ದೇವಿಕುಮಾರಿ ವಿಶ್ವನಾಥ್ ಇನ್ನಿತರರು ಕಾಣಿಕೆ ಮತ್ತು ದವಸ-ಧಾನ್ಯ ನೀಡುವುದಾಗಿ ವಾಗ್ದಾನ ಮಾಡಿದರು.

ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಸ್ವಾಮೀಜಿ, ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಯಾದವ ಗುರುಪೀಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಗಾಣಿಗ ಗುರುಪೀಠದ ಶ್ರೀ ಬಸವಕುಮಾರ ಸ್ವಾಮೀಜಿ, ಛಲವಾದಿ ಗುರುಪೀಠದ ಶ್ರೀ ಬಸವ ನಾಗಿದೇವ ಸ್ವಾಮೀಜಿ, ದಾವಣಗೆರೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಶಿರಸಿ ರುದ್ರದೇವರ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಹಾವೇರಿ ಹೊಸಮಠದ ಶ್ರೀ ಬಸವ ಶಾಂತಲಿಂಗ ಸ್ವಾಮೀಜಿ, ಚಳ್ಳಕೆರೆಯ ಶ್ರೀ ಬಸವ ಕಿರಣ ಸ್ವಾಮೀಜಿ, ತಿಪ್ಪೇರುದ್ರ ಸ್ವಾಮೀಜಿ, ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ, ಎಲ್.ಬಿ. ರಾಜಶೇಖರ್, ತಾಜ್‌ಪೀರ್, ಫಾತ್ಯರಾಜನ್, ನಿರಂಜನ ಮೂರ್ತಿ, ಶಂಕರಮೂರ್ತಿ, ಎಸ್.ವಿ. ನಾಗರಾಜಪ್ಪ, ಕೆಇಬಿ ಷಣ್ಮುಖಪ್ಪ, ಮರುಳಾರಾಧ್ಯ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ಶರಣ ಸಂಸ್ಕೃತಿ ಉತ್ಸವದ ಕಾರ್ಯಾಧ್ಯಕ್ಷ ಕೆ.ಎಸ್. ನವೀನ್ ಸ್ವಾಗತಿಸಿದರು. ಜಿತೇಂದ್ರ ನಿರೂಪಿಸಿದರು.

error: Content is protected !!