ನೂರಾರು ಕೆರೆ, ವ್ಯಾಪಾರ ಪೇಟೆಗಳನ್ನು ನಿರ್ಮಿಸಿದ ಕೆಂಪೇಗೌಡರು

ಹೊನ್ನಾಳಿ, ಜೂ.27- ನೂರಾರು ಕೆರೆಗಳನ್ನು ನಿರ್ಮಾಣ ಮಾಡಿ ಹಾಗೂ ವ್ಯಾಪಾರ, ವಹಿವಾಟಿಗೆ ಪೇಟೆಗಳನ್ನು ನಿರ್ಮಾಣ ಮಾಡಿ, ಅತ್ಯಂತ ಯೋಜನಾ ಬದ್ಧವಾಗಿ ಬೃಹತ್ ಬೆಂಗಳೂರನ್ನು ನಿರ್ಮಿಸಿದ ಕೀರ್ತಿ ನಾಡ ಪ್ರಭು ಕೆಂಪೆಗೌಡರಿಗೆ ಸಲ್ಲುತ್ತದೆ ಎಂದು ಗ್ರೇಡ್-2 ತಹಶೀಲ್ದಾರ್ ಸುರೇಶ್ ಹೇಳಿದರು.

ನಗರದ ತಾಲ್ಲೂಕು ಕಚೇರಿಯಲ್ಲಿ ಇಂದು ಏರ್ಪಾಡಾಗಿದ್ದ ನಾಡಪ್ರಭು ಕೆಂಪೇಗೌಡರ 512 ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದು ಇಡೀ ವಿಶ್ವದಲ್ಲೇ ಬೆಂಗಳೂರು ಗುರುತಿಸಿಕೊಂಡಿದ್ದರೆ ಅದಕ್ಕೆ ಕಾರಣ ಧೀಮಂತ ರಾಜ ಹಾಗೂ ಸಹೃದಯಿ ಕೆಂಪೇಗೌಡ ಎಂದರೆ ತಪ್ಪಾಗಲಾರದು. ಅವರ ಆಡಳಿತದಲ್ಲಿ ಕೋಟೆ ಕೊತ್ತಲಗಳು, ಕೆರೆ ಕಟ್ಟೆಗಳು ಹಾಗೂ ಕಲ್ಯಾಣಿಗಳನ್ನು ಕಟ್ಟಿಸಿದ್ದರು. ಈಗ ಅವುಗಳು ಕಣ್ಮರೆಯಾಗಿವೆ. ಈಗ ಕೆಂಪೇಗೌಡರ ಸವಿನೆನಪಿಗಾಗಿ ಅವುಗಳನ್ನು ಉಳಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ನಾಡಪ್ರಭು ಕೆಂಪೇಗೌಡ ಅವರ ಆದರ್ಶ ಹಾಗೂ ಮೌಲ್ಯಗಳನ್ನು ನಾಡಿನ ಜನತೆಗೆ ಪರಿಚಯಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅವರು ಹೇಳಿದರು.

ಶಿರಸ್ತೇದಾರ್ ಸುಭಾಷ್, ಪತ್ರಕರ್ತ ಶ್ರೀನಿವಾಸ್, ಪ್ರಥಮ ದರ್ಜೆ ಸಹಾಯಕ ರವಿಕುಮಾರ್, ರಾಜಸ್ವ ನಿರೀಕ್ಷಕ ರಮೇಶ್, ಮಂಜುನಾಥ್, ನಾಗರಾಜ್ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

error: Content is protected !!