ದಾವಣಗೆರೆ, ಮಾ.29- ಅನರ್ಹ ಪಡಿತರ ಚೀಟಿದಾರರು ತಾವು ಪಡೆದಿರುವಂತಹ ಅಂತ್ಯೋ ದಯ/ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಸ್ವಯಂ ಪ್ರೇರಿತವಾಗಿ ಏ.15 ರೊಳಗೆ ಅರ್ಧ್ಯಪಡೆ ಮಾಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಅಥವಾ ದಂಡ ವಸೂಲಿ ಮಾಡುವುದಿಲ್ಲವೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸರ್ಕಾರಿ ನೌಕರರ ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಸಗಿ ನೌಕರರು ಮತ್ತು ಸರ್ಕಾರಿ ಅನುದಾನಿತ ನೌಕರರು, ನಿಗಮಗಳು, ಮಂಡಳಿಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ
ಎಲ್ಲಾ ಕುಟುಂಬಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು.
ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನ ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿರುವ ಕುಟುಂಬಗಳು, ಕುಟುಂಬದ ವಾರ್ಷಿಕ ಆದಾಯವು ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು, ಒಂದೇ ಕುಟುಂಬದಲ್ಲಿದ್ದರೂ ಒಟ್ಟಿಗೆ ವಾಸಿಸುತ್ತಿದ್ದರೂ ಪ್ರತ್ಯೇಕ ಪಡಿತರ ಚೀಟಿ ಹೊಂದಿರುವವರು ಆದ್ಯತಾ (ಬಿಪಿಎಲ್) ವರ್ಗದ (ಎಎವೈ/ಪಿಹೆಚ್‍ಹೆಚ್) ಪಡಿತರ ಚೀಟಿಗಳನ್ನು ಹೊಂದಿರುವುದು ಕಾನೂನು ಬಾಹಿರ ಕ್ರಮವಾಗಿರುತ್ತದೆ.
ಆದ್ದರಿಂದ ಇವರು ಏ.15 ರ ಒಳಗಾಗಿ ಪಡಿತರ ಚೀಟಿಗಳನ್ನು ಸ್ವಯಂ ಪ್ರೇರಿತವಾಗಿ ಅಧ್ಯರ್ಪಣೆ ಮಾಡಿದರೆ ಅಂಥವರ
ವಿರುದ್ಧ ಯಾವುದೇ ಕಾನೂನು ಕ್ರಮ ಅಥವಾ ದಂಡ ವಸೂಲಿ ಮಾಡಲಾಗುವುದಿಲ್ಲ
ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.