ದಾವಣಗೆರೆ, ಮಾ.29- ಕರ್ನಾಟಕ ಸಾಹಿತ್ಯ ಅಕಾಡೆಮಿಯು 2021 ರ ಮೇ ತಿಂಗಳಿನಲ್ಲಿ ಗಿರಿಜನ ಉಪಯೋಜನೆಯಡಿ ರಾಜ್ಯಮಟ್ಟದ 5 ದಿನಗಳ ಬುಡಕಟ್ಟು ಸಾಹಿತ್ಯ ಮತ್ತು ಸಂಸ್ಕೃತಿ ಕಮ್ಮಟ ಆಯೋಜಿಸಲು ಉದ್ದೇಶಿಸಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 50 ವರ್ಷದೊಳಗಿನ ವಯಸ್ಸಿನ ರಾಜ್ಯದ ಎಲ್ಲ ಭಾಗದ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಏ.20 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ http://karnatakasahityaacademy.org ವೆಬ್ಸೈಟ್ ಮೂಲಕ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್ ತಿಳಿಸಿದ್ದಾರೆ.
February 1, 2025