ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಜನಶಕ್ತಿಯ ಎದುರು ಮಣಿಯಲೇಬೇಕು
ದಾವಣಗೆರೆ, ನ.19- ರೈತರಿಗೆ ಮಾರಕವಾಗಿದ್ದ ಮೂರು ಕೃಷಿ ಕಾಯಿದೆಗಳನ್ನು ಕೇಂದ್ರ ಸರ್ಕಾರ ವಾಪಸ್ ತೆಗೆದುಕೊಂಡಿರುವುದನ್ನು ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಸ್ವಾಗತಿಸಿದ್ದಾರೆ.
ಇದು ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ ಎಂದು ರೈತ ಹೋರಾಟಗಾರರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿ ಯಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಕೃಷಿ ಕಾಯ್ದೆಯಷ್ಟೇ ಅಲ್ಲ, ಕೇಂದ್ರ ಬಿಜೆಪಿ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾಗಿವೆ ಎಂದು ದೂರಿದ್ದಾರೆ.
ಕೃಷಿ ಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು, ಈ ಕರಾಳ ಕಾಯ್ದೆ ರದ್ಧತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂ. ಪರಿಹಾರ ಕೊಡಬೇಕೆಂದು ಒತ್ತಾಯಿಸಿದ್ದಾರೆ.