ಕಾಂಗ್ರೆಸ್ ಅಭ್ಯರ್ಥಿ ಪರ ನಗರದಲ್ಲಿನ ಪ್ರಚಾರ ಸಭೆಯಲ್ಲಿ ಡಾ|| ಜಿ.ಪರಮೇಶ್ವರ್
ದಾವಣಗೆರೆ, ಡಿ. 1- ಚಿತ್ರದುರ್ಗ – ದಾವಣಗೆರೆ ಜಿಲ್ಲೆಯ ವಿಧಾನಪರಿಷತ್ ಚುನಾ ವಣೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಸೋಮ ಶೇಖರ್ ಪರವಾಗಿ ನಗರದಲ್ಲಿ ಬುಧವಾರ ಸಂಜೆ ಪ್ರಚಾರ ಸಭೆ ನಡೆಸಲಾಯಿತು.
ಸಭೆಯನ್ನು ಉದ್ಘಾಟಿಸಿದ ಮಾಜಿ ಉಪ ಮುಖ್ಯಮಂತ್ರಿ ಡಾ|| ಜಿ.ಪರಮೇಶ್ವರ್ ಮಾತನಾಡಿ, ಡಿಸೆಂಬರ್ 10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆ ಮುಂದಿನ ವಿಧಾ ನಸಭೆ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿ ಆಗುವಂತೆ ಮತ ಚಲಾಯಿಸಿ ಕಾಂಗ್ರೆಸ್ ಅಭ್ಯರ್ಥಿ ಸೋಮಶೇಖರ್ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕು ಎಂದರು. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರರಾಗಿರುವ ನೀವುಗಳೇ ಮುಂದಾಳತ್ವ ವಹಿಸಿ ದಾವಣಗೆರೆಯ ಎರಡೂ ಕ್ಷೇತ್ರಗಳಲ್ಲಿ ಶಾಮನೂರು ಶಿವಶಂಕರಪ್ಪ ಮತ್ತು
ಎಸ್.ಎಸ್.ಮಲ್ಲಿಕಾರ್ಜುನ್ ಅವರುಗಳನ್ನು ಗೆಲ್ಲಿಸಿ ಎಂದು ಕರೆ ನೀಡಿದರು.
ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಕರ್ನಾಟಕವನ್ನು ಸ್ವರ್ಗ
ಮಾಡುತ್ತೇವೆ ಎಂದ ಬಿಜೆಪಿಗರು, ಇಂದು ಕರ್ನಾಟಕವನ್ನು ನರಕವನ್ನಾಗಿಸುತ್ತಿದ್ದಾರೆ. ಅತಿವೃಷ್ಟಿ- ಅನಾವೃಷ್ಟಿಯಿಂದ ಆಗಿರುವ ನಷ್ಟ ಸರಿಪಡಿಸಲು ಆಗದ ಇಂತಹ ಸರ್ಕಾರ ನಮಗ ಬೇಕಾ? ಎಂದು ಪ್ರಶ್ನಿಸಿದರು.
ಬಿಜೆಪಿಗರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಚುನಾವಣೆ ಹಿನ್ನೆಲೆಯಲ್ಲಿ ಪೆಟ್ರೋಲ್ ದರ ಕಡಿಮೆ ಮಾಡಿ ರೈತರಿಗೆ ಮಾರಕವಾದ ಕೃಷಿ ಕಾನೂನನ್ನು ರದ್ದುಗೊಳಿಸಿದರು. ಒಂದು ಕಡೆ ಮೀಸಲಾತಿ ವಿರುದ್ಧ ಹೇಳಿಕೆ ನೀಡುವ ಬಿಜೆಪಿಗರಿಗೆ ಮೀಸಲಾತಿ ಮೂಲಕ ಗೆದ್ದ ಪಂಚಾಯಿತಿ ಸದಸ್ಯರಲ್ಲಿ ಮತ ಕೇಳುವ ಹಕ್ಕು ಇದೆಯಾ ಎಂದರು. ಕಾಂಗ್ರೆಸ್ ಪಕ್ಷ ಪ್ರತಿಯೊಬ್ಬರಿಗೂ ಅಧಿಕಾರ ಸಿಗಬೇಕೆಂಬ ದೃಷ್ಟಿಯಿಂದ ಅಧಿಕಾರ ವಿಕೇಂದ್ರಿಕರಣ ಮಾಡಿ ಎಂದರು.
ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಮಾತನಾಡಿ, ಕಳೆದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ರಘು ಆಚಾರ್ ಅವರನ್ನು ದಾವಣಗೆರೆ ಜಿಲ್ಲೆಯಲ್ಲಿ ಅತಿ ಹೆಚ್ಚು ಮತಗಳನ್ನು ಕೊಡಿಸುವ ಮೂಲಕ ಗೆಲ್ಲಿಸಲಾಗಿತ್ತು. ಈ ಬಾರಿಯೂ ಸಹ ಬಿ.ಸೋಮಶೇಖರ್ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಲಾಗುವುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಡಾ|| ಶಾಮನೂರು ಶಿವಶಂಕರಪ್ಪ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದ್ದು, ಗ್ರಾಮ ಪಂಚಾಯಿತಿ ಮತ್ತು ಪಾಲಿಕೆ ಸದಸ್ಯರು ಸೋಮಶೇಖರ್ ಅವರನ್ನು ಗೆಲ್ಲಿಸುವ ಮೂಲಕ ತೋರಿಸಿಕೊಡಬೇಕೆಂದು ಕರೆ ನೀಡಿದರು.
ಕಳೆದ ವರ್ಷ ಮಳೆಯಿಂದ ಹಾನಿಯಾದ ಸಂತ್ರಸ್ತರಿಗೆ ಇಂದಿಗೂ ಸಹ ಪರಿಹಾರ ತಲುಪಿಲ್ಲ, ಗುತ್ತಿಗೆದಾರರಿಗೆ ಹಣ ನೀಡುತ್ತಿಲ್ಲ. ಇಂತಹ ಸರ್ಕಾರಗಳು ಅಗತ್ಯವಿದೆಯೇ? ಎಂದು ಪ್ರಶ್ನಿಸಿದ ಅವರು, ಮುಂದೆ ಕಾಂಗ್ರೆಸ್ ಸರ್ಕಾರ ಬರಲಿದೆ ಎಂಬುದನ್ನು ಈ ಚುನಾವಣೆ ಮೂಲಕ ಸ್ಪಷ್ಟ ಸಂದೇಶ ನೀಡಬೇಕು ಎಂದು ಕರೆ ನೀಡಿದರು.
ಆವರಗೊಳ್ಳ ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರೇಶ್, ಬೆಳವನೂರು ಪಂಚಾಯಿತಿ ಮಾಲತೇಶ್ ಮಾತನಾಡಿ, ಗ್ರಾಮ ಪಂಚಾಯಿತಿ ಸಮಸ್ಯೆಯನ್ನು ವಿಧಾನಸಭಾ ಅಧಿವೇಶನದಲ್ಲಿ ಚರ್ಚಿಸಲಿ ಎಂದು ಆಶಿಸಿದರು.
ಮಾಜಿ ಸಚಿವ ಟಿ.ಬಿ. ಜಯಚಂದ್ರ, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕೆಪಿಸಿಸಿ ವಕ್ತಾರ ಮುರುಳೀಧರ್ ಹಾಲಪ್ಪ, ಕಾಂಗ್ರೆಸ್ ಅಭ್ಯರ್ಥಿ ಬಿ.ಸೋಮಶೇಖರ್ ಅವರುಗಳು ಮಾತನಾಡಿದರು
ಕಾಂಗ್ರೆಸ್ ಹಿರಿಯ ಮುಖಂಡ ಸೈಯದ್ ಸೈಪುಲ್ಲಾ, ಕಾಂಗ್ರೆಸ್ ಎಸ್. ಟಿ. ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಉಪಾಧ್ಯಕ್ಷ ಮುದೇಗೌಡ್ರು ಗಿರೀಶ್, ವಕ್ತಾರ ನಾಗೇಂದ್ರಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬಿ.ಕೆ.ಪರಶುರಾಮ್, ಜಿ.ಸಿ.ನಿಂಗಪ್ಪ, ಕೆ.ಜಿ.ಶಿವಕುಮಾರ್, ಅಯೂಬ್ ಪೈಲ್ವಾನ್, ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್ ಮತ್ತು ಇತರರು ಸಭೆಯಲ್ಲಿ