ಸಭೆ – ಸಮಾರಂಭಗಳು 500 ಮಂದಿಗೆ ಸೀಮಿತ

ಸಭೆ - ಸಮಾರಂಭಗಳು 500 ಮಂದಿಗೆ ಸೀಮಿತ - Janathavaniಕೋವಿಡ್ ನಿಯಂತ್ರಣ ಮುಂಜಾಗ್ರತೆಗೆ ಮಾರ್ಗಸೂಚಿ ಜಾರಿ : ಡಿಸಿ

ದಾವಣಗೆರೆ, ಡಿ. 6- ಕೊರೊನಾ ಸಾಂಕ್ರಾಮಿಕ ರೋಗದ ನಿಯಂತ್ರಣ ಕಾರ್ಯ ಕೈಗೊಳ್ಳಲು ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು, ನೂತನ ಮಾರ್ಗಸೂಚಿಯು ಮುಂದಿನ ಆದೇಶದವರೆಗೂ ಜಾರಿಯಲ್ಲಿರುತ್ತದೆ,  ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಜಿಲ್ಲೆಯಲ್ಲಿ ಸಾರ್ವಜನಿಕರು ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚನೆ ನೀಡಿದ್ದಾರೆ.

ಎಲ್ಲಾ ಸಭೆ, ಸಮಾರಂಭ, ಸಮ್ಮೇಳನ ಇತ್ಯಾದಿ ಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು 500 ಜನರಿಗೆ ಸೀಮಿತಗೊಳಿಸಲಾಗಿದೆ. ಇದರ ಜಾರಿ ಸಂಘಟಕರ / ವ್ಯವಸ್ಥಾಪಕರ ಜವಾಬ್ದಾರಿಯಾಗಿ ರುತ್ತದೆ ಎಂದವರು ಹೇಳಿದ್ದಾರೆ.

ಶೈಕ್ಷಣಿಕ ಸಂಸ್ಥೆಗಳಲ್ಲಿ 2022ರ ಜನವರಿವರೆಗೆ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ.   ಶಾಲಾ/ಕಾಲೇಜುಗಳಿಗೆ ತೆರಳುವ 18 ವರ್ಷ ವಯೋಮಾನದೊಳಗಿನ ಮಕ್ಕಳ ಪೋಷಕರು ಕಡ್ಡಾಯವಾಗಿ ಎರಡು ಡೋಸ್ ಕೊರೊನಾ ಲಸಿಕೆ ಪಡೆಯಬೇಕು.  ಆರೋಗ್ಯ ಕಾರ್ಯಕರ್ತರು, 65 ವಯಸ್ಸು ಮೀರಿದ ಹಿರಿಯ ನಾಗರಿಕರು ಮತ್ತು ಸಹವರ್ತಿ ರೋಗಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸರ್ಕಾರದಿಂದ ಕಡ್ಡಾಯ ವಾಗಿ ಕೊರೊನಾ ತಪಾಸಣೆ ನಡೆಸಲಾಗುವುದು. 

ಎರಡು ಡೋಸ್ ಲಸಿಕೆ ಪಡೆದಿರುವಂತಹ ವ್ಯಕ್ತಿಗಳಿಗೆ ಮಾತ್ರ ಮಾಲ್‍ಗಳು, ಸಿನಿಮಾ ಹಾಲ್/ಚಿತ್ರಮಂದಿರಗಳಲ್ಲಿ ಪ್ರವೇಶಕ್ಕೆ ಅವಕಾಶ ನೀಡಬೇಕು.  ಸರ್ಕಾರಿ ನೌಕರರು ಎರಡು ಡೋಸ್ ಲಸಿಕೆಯನ್ನು ತಪ್ಪದೇ ಪಡೆಯಲೇಬೇಕು. ಮಾಸ್ಕ್ ಧರಿಸದವರಿಗೆ ನಗರಪಾಲಿಕೆ ಪ್ರದೇಶಗಳಲ್ಲಿ ರೂ.250 ಮತ್ತು ಇನ್ನಿತರೆ ಪ್ರದೇಶಗಳಲ್ಲಿ ರೂ.100 ದಂಡವನ್ನು ವಿಧಿಸಲಾಗುವುದು ಎಂದು ಬೀಳಗಿ ತಿಳಿಸಿದ್ದಾರೆ.

ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮದ  ಅಡಿ ಕಾನೂನು ಕ್ರಮಕ್ಕೆ ಒಳಪಡಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶದಲ್ಲಿ ತಿಳಿಸಿದ್ದಾರೆ.

error: Content is protected !!