ಮಲೇಬೆನ್ನೂರು, ಸೆ.20- ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಜನ್ಮ ದಿನದ ಅಂಗ ವಾಗಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಮತ್ತು ಬೀರಲಿಂಗೇಶ್ವರ ಬಾಲಕಿಯರ ಹಾಗೂ ಬಾಲಕರ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನೋಟ್ಬುಕ್, ಪೆನ್ಗಳನ್ನು ವಿತರಿಸಲಾಯಿತು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ಕೊಂಡಜ್ಜಿ ಮಾತನಾಡಿ, ಎಸ್.ಎಸ್. ಮಲ್ಲಿಕಾರ್ಜುನ್ ಅವರ 54ನೇ ವರ್ಷದ ಜನ್ಮ ದಿನಾಚರಣೆಯನ್ನು ಕಳೆದ 4-5 ದಿನಗಳಿಂದ ವಿವಿಧ ಕಾರ್ಯಕ್ರಮಗಳ ಮೂಲಕ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಿದ್ದೇವೆ ಎಂದರು.
ಮುಂದೆ ಮತ್ತೆ ಜಿಲ್ಲೆಯ ನೇತೃತ್ವ ವಹಿಸಲಿರುವ ಮಲ್ಲಿಕಾರ್ಜುನ್ ಅವರಿಗೆ ಭಗವಂತ ಆಯುರಾರೋಗ್ಯ ಭಾಗ್ಯ ಕರುಣಿಸಲೆಂದು ನಿಖಿಲ್ ಶುಭ ಕೋರಿದರು.
ಜಿ.ಪಂ. ಮಾಜಿ ಸದಸ್ಯ ಬೆಣ್ಣೆಹಳ್ಳಿ ಹಾಲೇಶಪ್ಪ, ಎಪಿಎಂಸಿ ಅಧ್ಯಕ್ಷ ಜಿ. ಮಂಜುನಾಥ್ ಪಟೇಲ್, ತಾ.ಪಂ. ಮಾಜಿ ಅಧ್ಯಕ್ಷ ಎಂ.ಬಿ. ರೋಷನ್, ಸಮಾಜ ಸೇವಕ ನಂದಿಗಾವಿ ಶ್ರೀನಿವಾಸ್, ಬೀರಲಿಂಗೇಶ್ವರ ವಿದ್ಯಾಸಂಸ್ಥೆ ಅಧ್ಯಕ್ಷ ಪೂಜಾರ್ ಬಸಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ಅಬೀದ್ ಅಲಿ, ಡಿಸಿಸಿ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಜಿಗಳಿ ಆನಂದಪ್ಪ ಮಾತನಾಡಿದರು.
ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷ ಪಿ.ಎಸ್. ಹನುಮಂತಪ್ಪ, ಬೀರಲಿಂಗೇಶ್ವರ ವಿದ್ಯಾಸಂಸ್ಥೆಯ ಪೂಜಾರ್ ರೇವಣಪ್ಪ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೊನ್ನಾಳಿಯ ರಂಜಿತ್, ಹರಿಹರ ಯುವ ಕಾಂಗ್ರೆಸ್ ಅಧ್ಯಕ್ಷ ಹಯಾಜ್ ಅಹಮದ್, ಮಲೇಬೆನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಜಾಫರ್, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಕುಂಬಳೂರು ವಾಸು, ಮುಖಂಡರಾದ ಕೆ.ಜಿ. ಪರಮೇಶ್ವರಪ್ಪ, ಚಿಟ್ಟಕ್ಕಿ ನಾಗರಾಜ್, ಜಿಗಳೇರ ಮಂಜಣ್ಣ, ತಿಪ್ಪೇಶ್, ಸರ್ಕಾರಿ ಪದವಿ ಪೂರ್ವ ಕಾಲೇಜು ಉಪ ಪ್ರಾಚಾರ್ಯ ಹೆಚ್. ಹನುಮಂತಪ್ಪ, ಬೀರಲಿಂಗೇಶ್ವರ ಬಾಲಕರ ಪ್ರೌಢಶಾಲೆಯ ಮುಖ್ಯಶಿಕ್ಷಕ ಸಿ. ಜಯ್ಯಣ್ಣ ಹಾಗೂ ಸಹ ಶಿಕ್ಷಕರು ಹಾಜರಿದ್ದರು.