ದಾವಣಗೆರೆ, ಡಿ.12- ಶೀಘ್ರದಲ್ಲೇ ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಸಚಿವ ರಾಜೀವ್ ಚಂದ್ರಶೇಖರ್ ಹೇಳಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೌಶಲ್ಯ, ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್ ಹಾಗೂ ಹಣಕಾಸು ಸಚಿವಾಲಯಗಳ ಸಂಯುಕ್ತಾಶ್ರಯದಲ್ಲಿ ಈ ನಗರಗಳಲ್ಲಿ ಹೆಚ್ಚಿನ ಉದ್ಯೋಗವಕಾಶ ದೊರೆಯುವಂತೆ ಮಾಡಲಾಗುವುದು ಎಂದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಸಹ ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಲು ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.