ದಾವಣಗೆರೆ,ಮೇ 16- ಎಲ್ಲಾ ದೇವಸ್ಥಾನ ಮತ್ತು ಪ್ರಾರ್ಥನಾ ಮಂದಿರಗಳನ್ನು ತೆರೆಯುವುದರ ಮೂಲಕ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡು ವಂತೆ ಜಿಲ್ಲಾ ವೀರಶೈವ ಸದ್ಭೋಧನಾ ಸಮಿತಿ ಅಧ್ಯಕ್ಷರೂ ಆದ ಮಹಾನಗರ ಪಾಲಿಕೆ ಸದಸ್ಯ ದೇವರಮನೆ ಶಿವಕುಮಾರ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕೊರೊನಾ ವೈರಸ್ ಕಾರಣದಿಂದ ಆಗಿದ್ದ ಲಾಕ್ ಡೌನ್ ಪರಿಣಾಮ ಮುಚ್ಚಲಾಗಿದ್ದ ದೇವಸ್ಥಾನಗಳನ್ನು ತೆರೆಯಬೇಕು. ಮಾಸ್ಕ್ ಬಳಕೆ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ನಿಬಂಧನೆಯೊಂದಿಗೆ ಭಕ್ತರು ದೇವರ ದರ್ಶನ ಪಡೆಯಲು ಅವಕಾಶ ಕಲ್ಪಿಸಬೇಕು ಎಂದು ಅವರು ಕೇಳಿಕೊಂಡಿದ್ದಾರೆ.
December 26, 2024