ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಬಸವರಾಜ್
ದಾವಣಗೆರೆ, ಮೇ 26- ನಗರಾಭಿವೃದ್ಧಿ ಪ್ರಾಧಿಕಾರದಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿ ಗಳನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಶಂಕುಸ್ಥಾಪನೆ ನೆರವೇರಿಸಿರುವ ಕಾಮಗಾರಿ ಗಳನ್ನು ಪೂರ್ಣಗೊಳಿಸಲು ಸಿದ್ದತೆ ನಡೆಸಬೇಕು. ಜೊತೆಗೆ ರಿಂಗ್ ರಸ್ತೆ ಸೇರಿದಂತೆ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪ ಅಳವಡಿಸುವುದು, ಪ್ರಾಧಿಕಾರದ ವತಿ ಯಿಂದ ಕೈಗೊಂಡಿರುವ ಕೆರೆಗಳ ಅಭಿವೃದ್ಧಿ ಕಾಮಗಾರಿ ಸೇರಿದಂತೆ, ನಿವೇಶನ ಹಂಚಿಕೆ ಕಾರ್ಯಗಳನ್ನು ಆದಷ್ಟು ಬೇಗ ಪೂರ್ಣ ಗೊಳಿಸಬೇಕೆಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ದೂಡಾ ಕಚೇರಿಯ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂಸದ ಜಿ.ಎಂ.ಸಿದ್ದೇಶ್ವರ ಮಾತ ನಾಡಿ, ಈಗಾಗಲೇ ನಿವೇಶನಕ್ಕಾಗಿ ಅರ್ಜಿ ಹಾಕಿ 8 ವರ್ಷಗಳು ಕಳೆದಿವೆ. ಹಣ ಪಾವತಿ ಸಿದವರಲ್ಲಿ ಯಾರಿಗೆ ನಿವೇಶನ ಇಲ್ಲವೋ ಅವರಿಗೆ ನಿವೇಶನ ಹಂಚಿಕೆ ಮಾಡಬೇಕು. ಇಲ್ಲವಾದಲ್ಲಿ ಅವರು ಕಟ್ಟಿರುವ ಹಣಕ್ಕೆ ಬಡ್ಡಿ ಸೇರಿಸಿ, ವಾಪಸ್ ಮಾಡಬೇಕೆಂದು ತಿಳಿಸಿದರು.
ಮೇಯರ್ ಬಿ.ಜಿ.ಅಜಯ್ ಕುಮಾರ್ ಮಾತನಾಡಿ, ಅಭಿವೃದ್ಧಿ ಪಡಿಸಿದ ಮತ್ತು ಅಭಿವೃದ್ಧಿಪಡಿಸಬೇಕಾದ ವರ್ತುಲ ರಸ್ತೆಯ ಕಾಮಗಾರಿ ಕುರಿತು ಪರ್ಯಾಯ ಮಾರ್ಗ ಅನುಸರಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ದೂಡಾ ಆಯುಕ್ತ ಬಿ.ಟಿ.ಕುಮಾರ ಸ್ವಾಮಿ, 37 ಕೋಟಿ ರೂ. ವೆಚ್ಚದಲ್ಲಿ ಪಿ.ಬಿ ರಸ್ತೆಯಿಂದ ಎಸ್ಪಿ ಕಚೇರಿವರೆಗೆ ನಿರ್ಮಿಸಿ ರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು, ಬಣ್ಣ ಹಚ್ಚುವ ಕಾರ್ಯ ಬಾಕಿ ಇದೆ ಎಂದಾಗ, ಸಚಿವರು ಮುಖ್ಯ ಮಂತ್ರಿಗಳನ್ನು ಕರೆಸಿ ಉದ್ಘಾಟಿಸಬೇಕೆಂದರು.
ಸಭೆಯಲ್ಲಿ ಶಾಸಕರಾದ ಎಸ್.ಎ.ರವೀಂದ್ರನಾಥ್, ಪ್ರೊ.ಲಿಂಗಣ್ಣ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕು ಮಾರ್, ಎಸ್ಪಿ ಹನುಮಂತರಾಯ, ಎಡಿಸಿ ಪೂಜಾರ್ ವೀರಮಲ್ಲಪ್ಪ ಉಪಸ್ಥಿತರಿದ್ದರು.