ದಾವಣಗೆರೆ, ಮೇ 29- ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್ ಅವರಿಗೆ 4 ಬಾರಿ ಪತ್ರ ಮತ್ತು 2 ಬಾರಿ ಫೋನ್ ಮೂಲಕ ಕೊಲೆ ಬೆದರಿಕೆ ಹಾಕಿದಂತಹ ದುಷ್ಟಶಕ್ತಿಗಳನ್ನು ಶೀಘ್ರವೇ ಬಂಧಿಸುವುದಲ್ಲದೇ, ಬಸವರಾಜ್ ಅವರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರುಗಳಿಗೆ ಪತ್ರ ಬರೆದಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೂ ಪತ್ರ ಬರೆದಿದ್ದು, ಬಸವರಾಜ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ನೀಡಿದರು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಸದಸ್ಯರುಗಳಾದ ದೇವರಮನೆ ಶಿವಕುಮಾರ್, ಗಡಿಗುಡಾಳ್ ಮಂಜುನಾಥ್, ಕೆ. ಚಮನ್ಸಾಬ್, ಸೈಯದ್ ಚಾರ್ಲಿ, ವಿನಾಯಕ ಪೈಲ್ವಾನ್, ಪಕ್ಷದ ಮುಖಂಡರಾದ ಹುಲ್ಮನಿ ಗಣೇಶ್, ತರಕಾರಿ ಚಂದ್ರಪ್ಪ, ಕೆ.ಎಲ್.ಹರೀಶ್ ಬಸಾಪುರ, ಬಾತಿ ಶಿವಕುಮಾರ್ ಉಪಸ್ಥಿತರಿದ್ದರು.