ಡೆಂಗ್ಯೂ ನಿಯಂತ್ರಣದಲ್ಲಿ ಸಮುದಾಯದ ಪಾತ್ರ ಪ್ರಮುಖ

ಡಿ.ಹೆಚ್.ಓ ಡಾ. ರಾಘವೇಂದ್ರ ಸ್ವಾಮಿ

ದಾವಣಗೆರೆ, ಮೇ 30- ಮಳೆಗಾಲ ಪ್ರಾರಂಭವಾಗಲಿದ್ದು, ಡೆಂಗ್ಯೂ-ಚಿಕುನ್‌ಗುನ್ಯ ರೋಗಗಳನ್ನು ಹರಡುವ ಸೊಳ್ಳೆಗಳು ಹೆಚ್ಚಾಗಲಿವೆೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಹೆಚ್.ಎಸ್. ರಾಘವೇಂದ್ರ ಸ್ವಾಮಿ ಎಚ್ಚರಿಸಿದರು.

ನಗರದ ಮುದೇಗೌಡ್ರು ಮಲ್ಲಮ್ಮ ಮುರಿಗೆಪ್ಪ ಪ್ರೌಢಶಾಲೆಯ ಪ್ರಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಲ್ಲಾ ರೋಗಗಳ ನಿಯಂತ್ರಣದಲ್ಲಿ ಸಮುದಾಯದ ಪಾತ್ರ ಮುಖ್ಯವಾಗಿದೆ. ಈ ವರ್ಷದ ಘೋಷಣೆ ಡೆಂಗ್ಯೂ ನಿಯಂತ್ರಣದಲ್ಲಿ ಸಮುದಾಯದ ಪಾತ್ರ ಪ್ರಮುಖ ಎಂಬುದಾಗಿದೆ. ಕೊರೊನಾ ನಿಮಿತ್ತ ಮುಂದಿನ ದಿನಗಳಲ್ಲಿ ಎಲ್ಲ ರಾಷ್ಟ್ರೀಯ ಕಾರ್ಯಕ್ರಮಗಳನ್ನು ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ, ಮಾಸ್ಕ್ ಧರಿಸುವುದು, ಕೈಗಳನ್ನು ಮೇಲಿಂದ ಮೇಲೆ ತೊಳೆಯುವುದು, ಜನನಿಬಿಡ ಪ್ರದೇಶಗಳಲ್ಲಿ ಓಡಾಡದಂತೆ ಮುಂಜಾಗ್ರತೆ ವಹಿಸಿ ಎಲ್ಲಾ ಕಾರ್ಯಕ್ರಮಗಳನ್ನು ನಿರ್ವಹಿಸಲು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಕೆ.ಎಸ್. ಮೀನಾಕ್ಷಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರೇಣುಕಾರಾಧ್ಯ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದೇವರಾಜ ಪಾಂಡುರಂಗ ಪಟಗೆ, ನಗರ ಆರೋಗ್ಯ ಕೇಂದ್ರದ ಅಧಿಕಾರಿ ಡಾ. ವೇದಮೂರ್ತಿ, ಡಾ. ವೆಂಕಟೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ. ಸುರೇಶ್ ಬಾರ್ಕಿ, ಸಹಾಯಕ ಕೀಟ ಶಾಸ್ತ್ರಜ್ಞ ಸತೀಶ್ ಮಾಳಗಿ, ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್. ಉಮಾಪತಿ, ತಾಲ್ಲೂಕು ಹಿರಿಯ ಪುರುಷ ಆರೋಗ್ಯ ಸಹಾಯಕ ವೆಂಕಟಾಚಲ ಕುಮಾರ ಮತ್ತಿತರರು ಉಪಸ್ಥಿತರಿದ್ದರು.

error: Content is protected !!