ದಾವಣಗೆರೆ, ಜು. 12- ಕರ್ನಾಟಕ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಎಲ್ಲರಿಗೂ ಅನುಕೂಲವಾಗಲಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ನಗರದ ಸಿ.ಜೆ. ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷಾ ಲ್ಯಾಬ್ ಉದ್ಘಾಟಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದೇಶದ ಬೇರೆಲ್ಲೂ ಅಸ್ತಿತ್ವದಲ್ಲಿರದ 79(ಎ)(ಬಿ) ರಾಜ್ಯದಲ್ಲಿ ಮಾತ್ರ ಇತ್ತು. ಈಗ ಸರ್ಕಾರ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಭೂಮಿ ಪರಭಾರೆಗೆ ಮುಕ್ತ ಅವಕಾಶ ಕಲ್ಪಿಸಿದೆ ಎಂದರು.
ಭೂ ಸುಧಾರಣಾ ಕಾಯ್ದೆಯಲ್ಲಿ ಉಪವಿಭಾಗಾಧಿಕಾರಿಗಳು ಸಮರ್ಥವಾಗಿ ಸಮಸ್ಯೆಗಳನ್ನು ಬಗೆಹರಿಸುತ್ತಿರಲಿಲ್ಲ ಎಂದು ಆರೋಪವಿತ್ತು. ಈಗ ಅದನ್ನು ತೆಗೆದು ಹಾಕಿ. ಎಲ್ಲರಿಗೂ ಅನುಕೂಲ ಆಗುವಂತೆ ಕಾಯ್ದೆಯಲ್ಲಿ ಬದಲಾವಣೆ ತರಲಾಗುತ್ತಿದೆ.ಇದರಿಂದ ರೈತರಿಗೆ ಯಾವುದೇ ತೊಂದರೆ ಆಗುವುದಿಲ್ಲ ಸಮರ್ಥಿಸಿಕೊಂಡರು.
ನಾಲ್ವರಿಗೆ ಟಿಕೆಟ್ ಕೊಡಲು ಒತ್ತಾಯ: ವಿಧಾನ ಪರಿಷತ್ ಚುನಾವಣೆಯಲ್ಲಿ ಎಂ.ಟಿ.ಬಿ. ನಾಗರಾಜ್, ರೋಷನ್ ಬೇಗ್, ಶಂಕರ್ ಮತ್ತು ವಿಶ್ವನಾಥ್ ಅವರಿಗೆ ಟಿಕೆಟ್ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಒತ್ತಾಯಿಸಿದ್ದೇವೆ ಎಂದು ಹೇಳಿದರು.