ರಾಜೀವ್ ಗಾಂಧಿ ವಿವಿಗೆ ಎಐಡಿಎಸ್‌ಓ ಆಗ್ರಹ
ದಾವಣಗೆರೆ, ಜೂ.12- ಆನ್‌ಲೈನ್ ತರಗತಿ ಗಳ ಆಧಾರದ ಮೇಲೆ ಪರೀಕ್ಷೆಗಳನ್ನು ನಡೆಸದಂತೆ ರಾಜೀವ್ ಗಾಂಧಿ ಆರೋಗ್ಯ ಮತ್ತು ವಿಜ್ಞಾನ ವಿಶ್ವ ವಿದ್ಯಾನಿಲಯಕ್ಕೆ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಆಗ್ರಹಿಸಿದೆ.
ವಿವಿ ಇತ್ತೀಚೆಗೆ ಎಲ್ಲಾ ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ವೈದ್ಯಕೀಯ ಆರ್‌ಎಸ್ 4ನೇ ಬ್ಯಾಚ್‌ನ (ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ) ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸುವ ಕುರಿತು ಪ್ರಸ್ತಾಪಿಸಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿದೆ. ವೈಟ್‌ಸ್ಪಾರ್ಕ್ ಆನ್‌ಲೈನ್ ತರಗತಿಗಳಿಂದಾಗುವ ಸಮಸ್ಯೆಗಳ ಕುರಿತು ಮತ್ತು ಅದರ ಪ್ರಜಾತಾಂತ್ರಿಕ ಮತ್ತು ವೈಜ್ಞಾನಿಕ ಪರಿಹಾರ ಕ್ರಮಕ್ಕಾಗಿ ವಿಶ್ವವಿದ್ಯಾನಿಲಯದ ಕುಲಪತಿಗಳಿಗೆ ಮನವಿ ಸಲ್ಲಿಸಿದೆ.
ಮನವಿಯಲ್ಲಿ, ಆನ್‌ಲೈನ್ ತರಗತಿಗಳ ಆಧಾರದ ಮೇಲೆ ಪರೀಕ್ಷೆಗಳನ್ನು ನಡೆಸಬಾರದು, ಪರೀಕ್ಷೆಗಳ ಮೊದಲು ಅಗತ್ಯ ವಿರುವ ಕನಿಷ್ಟ ಥಿಯರಿ ಮತ್ತು ಪ್ರಾಯೋಗಿಕ ತರಗತಿಗಳನ್ನು ಖಚಿತಪಡಿಸಿಕೊಳ್ಳಿ ಹಾಗೂ ಪರೀಕ್ಷಾ ವೇಳಾಪಟ್ಟಿಯನ್ನು ಯೋಜಿಸುವಲ್ಲಿ ಶಿಕ್ಷಣ ತಜ್ಞರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪ್ರಜಾಸತ್ತಾತ್ಮಕವಾಗಿ ಒಳಗೊಂಡಿರಬೇಕು ಎಂದು ಸಂಘಟನೆಯ ಜಿಲ್ಲಾಧ್ಯಕ್ಷೆ ಸೌಮ್ಯ ಹಾಗೂ ಜಿಲ್ಲಾ ಕಾರ್ಯದರ್ಶಿ ಪೂಜಾ ನಂದಿಹಳ್ಳಿ ಒತ್ತಾಯಿಸಿದ್ದಾರೆ.