ದಾವಣಗೆರೆ, ಜೂ.12- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ಸಂಸ್ಥೆ ಇವರುಗಳ ಸಂಯುಕ್ತಾಶ್ರ ಯದಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿ ವಿಶ್ವ ಬಾಲ ಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆಯ ಅಂಗವಾಗಿ ಸಂಚಾರಿ ರಥದ ಜಾಗೃತಿ ಜಾಥಾ ಇಂದು ನಗರದಲ್ಲಿ ನಡೆಯಿತು.
ಶಾಸಕರುಗಳಾದ ಎಂ.ಪಿ ರೇಣುಕಾಚಾರ್ಯ, ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ. ರಾಮಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದೀಪಾ ಜಗದೀಶ್ ಅವರು ಹಸಿರು ನಿಶಾನೆ ತೋರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಘವೇಂದ್ರ ಸ್ವಾಮಿ, ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ಪ್ರಸನ್ನ ಕುಮಾರ್, ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಮಹಮ್ಮದ್ ಜಾಹೀರ್ ಬಾಷಾ, ಕಾರ್ಮಿಕ ಅಧಿಕಾರಿ ಇಬ್ರಾಹಿಂ ಸಾಬ್, ಕಾರ್ಮಿಕ ನಿರೀಕ್ಷಕರಾದ ಮುಮ್ತಾಜ್ ಬೇಗಂ, ರಾಜಪ್ಪ, ಕವಿತಾ ಕುಮಾರಿ, ರಾಜಶೇಖರ್ ಹಿರೇಮಠ ಮತ್ತಿತರರು ಉಪಸ್ಥಿತರಿದ್ದರು.