ದಾವಣಗೆರೆ, ಜೂ.12- ನಗರದ ಮಹಾಲಕ್ಷ್ಮಿ ಬಡಾವಣೆಯ ಕುಂದು ಕೊರತೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಬಡಾವಣೆಯಲ್ಲಿರುವ ಕಾವೇರಿ ಅಪಾರ್ಟ್ಮೆಂಟ್ನ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಸಾಲಿಗ್ರಾಮ ಗಣೇಶ್ ಶೆಣೈ ಅವರು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಬಡಾವಣೆಯ ಪಾಳುಬಿದ್ದ ರಸ್ತೆ, ಗಬ್ಬು ನಾರುತ್ತಿರುವ ಚರಂಡಿ, ದುರವಸ್ಥೆ ಯಲ್ಲಿರುವ ಬೀದಿ ದೀಪ, ಖಾಲಿ ನಿವೇಶನಗಳಲ್ಲಿ ಕಸದ ರಾಶಿ, ಹಂದಿಗಳ ಹಾವಳಿ ಇತ್ಯಾದಿ ಸಮಸ್ಯೆಗಳನ್ನು ಕೂಡಲೇ ಸರಿಪಡಿಸುವಂತೆ ಮನವಿ ನೀಡಲಾಯಿತು.
ಮನವಿ ಸ್ವೀಕರಿಸಿದ ಮೇಯರ್ ಅಜಯ್ ಕುಮಾರ್, ಇನ್ನೊಂದು ವಾರದಲ್ಲಿ ಶಾಸಕರು, ಪೌರಾಯುಕ್ತರು ಹಾಗೂ ಇತರೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲಿಸಿ, ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪಾಲಿಕೆ ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಟಿ. ವೀರೇಶ್, ಲೆಕ್ಕಪರಿಶೋಧಕ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಸನ್ನಕುಮಾರ್ ಉಪಸ್ಥಿತರಿದ್ದರು.