ವಿದ್ಯುತ್ ಬಿಲ್ ಸಂಪೂರ್ಣ ಮನ್ನಾ ಮಾಡಲು ತಿಮ್ಮಣ್ಣ ಒತ್ತಾಯ

ದಾವಣಗೆರೆ, ಜೂ.13- ಲಾಕ್‌ಡೌನ್ ಸಂದ ರ್ಭದಲ್ಲಿ ವಿದ್ಯುತ್ ಬಿಲ್‌ಗೆ ವಿನಾಯ್ತಿ ನೀಡ ಲಾಗುತ್ತಿದೆ ಎಂದು ಹೇಳಿದ್ದ ರಾಜ್ಯ ಸರ್ಕಾರ, ಇದೀಗ ಗ್ರಾಹಕರಿಂದ ದುಬಾರಿ ವಿದ್ಯುತ್ ಶುಲ್ಕ ವಸೂಲಿ ಮಾಡುವ ಮೂಲಕ ಗ್ರಾಹಕರನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿ ಪ್ರಧಾನ ಕಾರ್ಯದರ್ಶಿ ಹೆಚ್. ತಿಮ್ಮಣ್ಣ ದೂರಿದ್ದಾರೆ.

ವಿದ್ಯುತ್ ಬಿಲ್‌ ಅನ್ನು ಸಂಪೂರ್ಣ ಮನ್ನಾ ಮಾಡಬೇಕೆಂದು ಬೆಸ್ಕಾಂ ವ್ಯವಸ್ಥಾಪಕರಿಗೆ ಅವರು ಒತ್ತಾಯಿಸಿದ್ದು, ಪ್ರಸ್ತುತ ಸಂದರ್ಭದಲ್ಲಿ ಸಾರ್ವಜನಿಕರು ದುಡಿಮೆ ಇಲ್ಲದೆ ಸಂಕಷ್ಟ ಅನುಭವಿಸುತ್ತಿದ್ದು, ಭೀಕರ ಕೊರೊನಾ ಮಹಾಮಾರಿ ವಕ್ಕರಿಸಿ ದೇಶವನ್ನೇ ಅಲ್ಲೋಲ ಕಲ್ಲೋಲವಾಗಿಸಿದೆ. ಇಂತಹ ಸಂದರ್ಭದಲ್ಲಿ ಗ್ರಾಹಕರಿಗೆ ದುಬಾರಿ ವಿದ್ಯುತ್ ಬಿಲ್‌ ನೀಡಿ ಸಂಕಷ್ಟಕ್ಕೆ ಸಿಲುಕಿಸಿದೆ.

ಬಡ, ಮಧ್ಯಮ, ಕೂಲಿಕಾರ್ಮಿಕ ನಿವಾಸಿಗಳ ವಿದ್ಯುತ್ ಬಿಲ್‌ ಅನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರ ಮನ್ನಾ ಮಾಡುವ ಮೂಲಕ ಸಾರ್ವಜನಿಕರ ಹಿತದೃಷ್ಟಿ ಕಾಪಾಡಬೇಕು. ಈ ಕೂಡಲೇ ರಾಜ್ಯದ ಮುಖ್ಯಮಂತ್ರಿಗಳು ಎಲ್ಲಾ ಬೆಸ್ಕಾಂ ಅಧಿಕಾರಿಗಳೊಂದಿಗೆ ಚರ್ಚಿಸಿ, ಶೀಘ್ರವೇ ವಿದ್ಯುತ್ ಬಿಲ್ ಸಂಪೂರ್ಣ ಮನ್ನಾ ಮಾಡುವ ಆದೇಶ ಜಾರಿಗೊಳಿಸಬೇಕೆಂದು ಕೋರಿದ್ದಾರೆ.

error: Content is protected !!