ಕೇಂದ್ರ – ರಾಜ್ಯ ಸರ್ಕಾರಗಳು ಆರ್ಥಿಕವಾಗಿ ದಿವಾಳಿಯಾಗಿವೆ

ಕೇಂದ್ರ - ರಾಜ್ಯ ಸರ್ಕಾರಗಳು ಆರ್ಥಿಕವಾಗಿ ದಿವಾಳಿಯಾಗಿವೆ - Janathavaniಹರಪನಹಳ್ಳಿ, ಜೂ.15- ರಾಜ್ಯದಲ್ಲಿ ಡಿ ದರ್ಜೆಯ ನೌಕರರಿಗೆ ಸಂಬಳ ಕೊಡಲು ಹಣವಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸರ್ಕಾರದ ವಿರುದ್ಧ ಕುಟುಕಿದರು.

ತಾಲ್ಲೂಕಿನ ಲಕ್ಷ್ಮೀಪುರ ತಾಂಡಾದಲ್ಲಿ ಇಂದು ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನ ದಿನಕ್ಕೆ ಪೆಟ್ರೋಲ್ ಬೆಲೆ ಹೆಚ್ಚಾಗುತ್ತಿದೆ. ಇತ್ತ ರಾಜ್ಯ ಸರ್ಕಾರ ಕೋ ವಿಡ್ ವಿಚಾರದಲ್ಲಿ ಸಂ ಪೂರ್ಣ ವಿಫಲ ವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ  ಆರ್ಥಿಕ ಸ್ಥಿತಿಗತಿ ಬಗ್ಗೆ ಶ್ವೇತ ಪತ್ರ ಹೊರಡಿಸಲಿ ಎಂದು ಆಗ್ರಹಿಸಿದರು.

ಇಷ್ಟರಲ್ಲಿಯೇ  ಕೆಪಿಸಿಸಿ ಅಧ್ಯಕ್ಷರ ಅಧಿಕಾರ ಸ್ವೀಕಾರ: ಈಗಾಗಲೇ  ರಾಜ್ಯ ಸರ್ಕಾರ ಕೆಲ ಷರತ್ತುಗಳನ್ನು ಹಾಕಿ ಪರ ವಾನಿಗೆ ನೀಡಿದೆ ಎಂಬ ಮಾಹಿತಿ ಇದೆ.  ಇಷ್ಟರಲ್ಲಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ ಮಾಡಲಿ ದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಸಂಘಟನೆಯಾಗು ತ್ತಿದ್ದಾರೆ ಎಂದು ಹೆದರಿ ಆಡಳಿತ  ಪರ್ಮಿಷನ್ ನೀಡುತ್ತಿಲ್ಲ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವು ಒಗ್ಗಟ್ಟಿನಲ್ಲಿ ಇದ್ದೀವಿ ಎಂದು ಹೇಳಿದರು.

ಬಿಜೆಪಿಯಿಂದ ಪಾಠ ಕಲಿಯಬೇಕಿಲ್ಲ: ಈ ಹಿಂದೆ ಸಾಮಾನ್ಯ ಕಾರ್ಯಕರ್ತರಿಗೆ ಕಾಂಗ್ರೆಸ್ ಸ್ಥಾನ ನೀಡಿದೆ. ಈಗ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ್ ಖರ್ಗೆ ಯವರು ರಾಜ್ಯಸಭೆಗೆ ಅವಶ್ಯಕತೆ ಇತ್ತು. ಆದ್ದರಿಂದ ಹೈಕಮಾಂಡ್ ತೀರ್ಮಾನದಂತೆ ಮಲ್ಲಿಕಾರ್ಜುನ್ ಖರ್ಗೆಯವರನ್ನು ಆಯ್ಕೆ  ಮಾಡಲಾಗಿದೆ. ಬಿಜೆಪಿಯವರು ನಾವು ಸಾಮಾನ್ಯ ಕಾರ್ಯಕರ್ತರನ್ನು ಪರಿಗಣಿಸಿ ದ್ದೇವೆ ಎಂದು ಕೊಚ್ಚಿಕೊಳ್ಳುತ್ತಿದ್ದಾರೆ. ನಾವು ಬಿಜೆಪಿಯವ ರಿಂದ ಯಾವುದೇ ಪಾಠ ಕಲಿತುಕೊಳ್ಳುವ ಅವಶ್ಯಕತೆ ಇಲ್ಲ. ನಮ್ಮ ಪಕ್ಷದಲ್ಲಿ ಅನೇಕ ಕಾರ್ಯಕರ್ತರಿದ್ದಾರೆ. ವಿಧಾನ ಪರಿಷತ್‍ಗೆ  ಬಹಳ ಜನ ಆಕಾಂಕ್ಷಿತರು ಇದ್ದಾರೆ. ಈ ಕುರಿತು  ಪ್ರದೇಶ ಕಾಂಗ್ರೆಸ್ ಸಮಿತಿ, ಸಿಎಲ್‌ಪಿ ನಾಯಕರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

error: Content is protected !!