ದಾವಣಗೆರೆ,ಜೂ.14- ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ನಿಂದ ವಿನಾಯಿತಿ ನೀಡುವಂತೆ ಬಿಜೆಪಿ ಮುಖಂಡ ಅಜ್ಜಂಪುರ ಶೆಟ್ರು ಮೃತ್ಯುಂಜಯ ಅವರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
ಕೊರೊನಾದಿಂದಾಗಿ ಈಗಾಗಲೇ ಸರ್ಕಾರ ಸೂಚಿಸಿ ರುವಂತೆ ಪ್ರತಿಯೊಬ್ಬರೂ ಮಾಸ್ಕ್ ಹಾಕಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಮಾಸ್ಕ್ ಧರಿಸದಿದ್ದರೆ ಪೊಲೀಸರು ದಂಡ ಹಾಕುವುದರ ಮೂಲಕ ಕ್ರಮ ಕೈಗೊಂಡಿದ್ದಾರೆ.
ಹೆಲ್ಮೆಟ್ ಮತ್ತು ಮಾಸ್ಕ್ ಎರಡನ್ನೂ ಧರಿಸುವುದರಿಂದ ದ್ವಿಚಕ್ರ ವಾಹನ ಸವಾರನಿಗೆ ಕಿರಿ-ಕಿರಿಯಾಗುತ್ತಿದೆ. ಇದರಿಂದ ದ್ವಿಚಕ್ರ ವಾಹನದ ಸಹವಾಸವೇ ಬೇಡ ಎನ್ನುವಷ್ಟರ ಮಟ್ಟಿಗೆ ಹಿಂಸೆಯಾಗುತ್ತದೆ ಎಂದು ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಸೂಕ್ತ ಕ್ರಮ ಕೈಗೊಳ್ಳುವಂತೆ ಮೃತ್ಯುಂಜಯ ಆಗ್ರಹಿಸಿದ್ದಾರೆ.